ಕುಂದಾಪುರ( ಫೆ.02): ತಪಸ್ಯ ಫೌಂಡೇಶನ್, ಕರ್ನಾಟಕ ಪ್ರವಾಸೋದ್ಯಮ ಇಲಾಖೆ, ಐ.ಡಿ.ಎಫ್.ಸಿ. ಫಸ್ಟ್ ಬ್ಯಾಂಕ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಯೋಗದಲ್ಲಿ ಮಂಗಳೂರಿನಲ್ಲಿ ನಡೆದ ರಾಷ್ಟ್ರಮಟ್ಟದ ಟ್ರೆಯಥ್ಲಾನ್ ಸ್ಪರ್ಧೆಯ ಒಂದು ಕಿ.ಮೀ. ಸಮುದ್ರ ಈಜು ವಿಭಾಗದಲ್ಲಿ ಮುಲ್ಲಕಾಡು ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯ ಪದವೀಧರ ಪ್ರಾಥಮಿಕ ಶಿಕ್ಷಕ ನಾಗರಾಜ ಖಾರ್ವಿ ತೃತೀಯ ಸ್ಥಾನ ಪಡೆದಿದ್ದಾರೆ.
ಇವರು ಪದ್ಮಾಸನ ಭಂಗಿಯಲ್ಲಿ ಕಾಲಿಗೆ ಸರಪಳಿ ಬಿಗಿದು, ಬೀಗ ಜಡಿದು ಸಮುದ್ರದಲ್ಲಿ ಈಜಿದ ಜಾಗತಿಕ ದಾಖಲೆ ಹೊಂದಿದ್ದು, ರೇಷ್ಮೆ ಇಲಾಖೆಯ ನಿವೃತ್ತ ಇನ್ಸ್ಪೆಕ್ಟರ್ ಬಿ.ಕೆ.ನಾಯ್ಕ್ ಅವರು ತರಬೇತಿ ನೀಡಿರುತ್ತಾರೆ. ಆಸಕ್ತರಿಗೆ ಉಚಿತವಾಗಿ ಕಡಲ ಈಜುಗಾರಿಕೆ ತರಬೇತಿ ನೀಡುವ ಮಂಗಳೂರು ಕಡಲ ಈಜುಗಾರರ ತಂಡದ ಸಕ್ರಿಯ ಸದಸ್ಯರೂ ಆಗಿದ್ದಾರೆ.
ಇವರು ಗುಜ್ಜಾಡಿ ಗ್ರಾಮದ ಕಂಚುಗೋಡು ನಿವಾಸಿಯಾಗಿದ್ದು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಂಚುಗೋಡು, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಗುಜ್ಜಾಡಿ, ಸರಸ್ವತಿ ವಿದ್ಯಾಲಯ ಗಂಗೊಳ್ಳಿ, ಸರಕಾರಿ ಪ್ರಥಮ ದರ್ಜೆ ಕಾಲೇಜು ಬೈಂದೂರು, ಡಾ.ಟಿ.ಎಂ.ಎ ಪೈ ಶಿಕ್ಷಣ ಮಹಾವಿದ್ಯಾಲಯ ಕುಂಜಿಬೆಟ್ಟು ಇಲ್ಲಿನ ಹಳೆ ವಿದ್ಯಾರ್ಥಿ.