ಕುಂದಾಪುರ, (ಫೆ.3): ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಸಾಫ್ಟ್ ಸ್ಕಿಲ್ ಕೌಶಲ್ಯ (Soft Skills) ತರಬೇತಿ ಕಾರ್ಯಕ್ರಮವನ್ನು ನಾಂದಿ ಫೌಂಡೇಶನ್ ಮತ್ತು GTT ಫೌಂಡೇಶನ್ ಸಹಯೋಗದಲ್ಲಿ ಉದ್ಘಾಟಿಸಲಾಯಿತು.
8 ದಿನಗಳ ಈ ತರಬೇತಿ ಕಾರ್ಯಕ್ರಮವು ವಿದ್ಯಾರ್ಥಿಗಳ ಉದ್ಯೋಗಾರ್ಹತೆ ಕೌಶಲ್ಯಗಳನ್ನು ಉತ್ತೇಜಿಸುವ ಹಾಗೂ ಸ್ಪರ್ಧಾತ್ಮಕ ಉದ್ಯೋಗ ಮಾರುಕಟ್ಟೆಗೆ ತಯಾರಿಸಲು ಉದ್ದೇಶಿಸಿದೆ. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ ಮಾತನಾಡಿ, ಉದ್ಯೋಗ ಪಡೆಯಲು ಅಗತ್ಯವಿರುವ ಕೌಶಲ್ಯಗಳ ಮಹತ್ವವನ್ನು ವಿವರಿಸಿದರು.
ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಕರ್ನಾಟಕ ಬ್ಯಾಂಕ್, ಕುಂದಾಪುರ ಶಾಖೆಯ ಅಧಿಕಾರಿಯಾದ ಶ್ರೀ ಉದಯ ಹೆಗ್ಡೆ ಮಾತನಾಡಿ, ಈ ಕಾಲದ ಸ್ಪರ್ಧಾತ್ಮಕ ಉದ್ಯೋಗ ಕ್ಷೇತ್ರದಲ್ಲಿ ಪದವಿ ವಿದ್ಯಾರ್ಥಿಗಳಿಗೆ ಅಗತ್ಯವಾದ ಜಾಗೃತಿಯ ಬಗ್ಗೆ ಉಪನ್ಯಾಸ ನೀಡಿದರು.
ಕಾಲೇಜಿನ ವೃತ್ತಿ ಮಾರ್ಗದರ್ಶನ ಘಟಕದ ಅಧಿಕಾರಿಯಾದ ಶ್ರೀ ತಿಮ್ಮಪ್ಪ ಡಿ.ಎಸ್. ಸ್ವಾಗತಿಸಿದರು. ಗಣಕ ವಿಜ್ಞಾನ ವಿಭಾಗದ ಮುಖ್ಯಸ್ಥ ಹಾಗೂ ಸಹ ಪ್ರಾಧ್ಯಾಪಕರಾದ ಶ್ರೀ ಮಹೇಶ್ ಕುಮಾರ್ ಅವರು ಉದ್ಯೋಗ ತರಬೇತಿ ಕಾರ್ಯಕ್ರಮದ ಪರಿಚಯ ನೀಡಿದರು.
ವಾಣಿಜ್ಯ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಹಾಗೂ ಉದ್ಯೋಗ ಸಂಯೋಜನಾ ಸಮಿತಿ ಸಲಹೆಗಾರರಾದ ಶ್ರೀಮತಿ ಪ್ರೀತಿ ಹೆಗ್ಡೆ ವಂದಿಸಿದರು. ಇಂಗೀಷ್ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಶ್ರೀಮತಿ ಸ್ವಾತಿ ಜಿ. ರಾವ್ ನಿರೂಪಿಸಿದರು. ಅಂತಿಮ ವರ್ಷದ ಬಿಸಿಎ ವಿದ್ಯಾರ್ಥಿನಿ ವೈಷ್ಣವಿ ಎಂ.ಎಸ್. ಪ್ರಾರ್ಥಿಸಿ, ನಿರೂಪಿಸಿದರು.
ಈ ತರಬೇತಿ ಕಾರ್ಯಕ್ರಮವು ವಿದ್ಯಾರ್ಥಿಗಳಿಗೆ ಉಪಯುಕ್ತ ಕೌಶಲ್ಯ ಹಾಗೂ ಅರಿವನ್ನು ಒದಗಿಸಿ, ಅವರ ಭವಿಷ್ಯದ ಉದ್ಯೋಗಕ್ಕೆ ಸಹಾಯ ಮಾಡುವ ನಿರೀಕ್ಷೆಯಾಗಿದೆ.