ಗುಜ್ಜಾಡಿ(ಫೆ,7): ಗ್ರಾಮದ ಬೆಣ್ಗೆರೆ ಶ್ರೀ ನಾಗ ದೇವಸ್ಥಾನದಲ್ಲಿ ನಾಗಮಂಡಲೋತ್ಸವದ ಸುವರ್ಣ ಮಹೋತ್ಸವದ ಪ್ರಯುಕ್ತ ನಡೆಯಲಿರುವ ಶ್ರೀ ನಾಗ ದೇವರ ಜೀರ್ಣಾಷ್ಟಬಂಧ ಪುನಃ ಪ್ರತಿಷ್ಠಾ ಮಹೋತ್ಸವ, ಬ್ರಹ್ಮಕಲಶೋತ್ಸವ ಮತ್ತು ಅಷ್ಟಪವಿತ್ರ ನಾಗಮಂಡಲೋತ್ಸವದ ಚಪ್ಪರ ಮುಹೂರ್ತ ಮತ್ತು ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಫೆಬ್ರವರಿ 07 ರಂದು ದೇವಸ್ಥಾನದಲ್ಲಿ ನಡೆಯಿತು.
ಶ್ರೀ ನಾಗ ದೇವಸ್ಥಾನ ಸೇವಾ ಸಮಿತಿ ಅಧ್ಯಕ್ಷ ಉಮೇಶ ಎಲ್.ಮೇಸ್ತ, ಸುವರ್ಣ ಮಹೋತ್ಸವ ಸಮಿತಿ ಅಧ್ಯಕ್ಷ ಗಣಪತಿ ವಿ. ಮೇಸ್ತ, ಗೌರವಾಧ್ಯಕ್ಷ ಸುರೇಶ ಖಾರ್ವಿ, ಪುರೋಹಿತರಾದ ರಾಘವೇಂದ್ರ ಅಡಿಗ ನಾಯಕವಾಡಿ, ಚೆನ್ನಕೇಶವ ಭಟ್ ಆನಗಳ್ಳಿ ಅವರ ನೇತೃತ್ವದಲ್ಲಿ ಮಾರ್ಚ್ನಲ್ಲಿ ನಡೆಯಲಿರುವ ನಾಗಮಂಡಲೋತ್ಸವದ ಚಪ್ಪರ ಮುಹೂರ್ತ ನೆರವೇರಿಸಿ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿ ಶುಭ ಹಾರೈಸಿದರು.
ದೇವಸ್ಥಾನದ ಕಾರ್ಯದರ್ಶಿ ಶ್ರೀಧರ ಮೇಸ್ತ, ಸುವರ್ಣ ಮಹೋತ್ಸವ ಸಮಿತಿ ಕಾರ್ಯದರ್ಶಿ ರಾಘವೇಂದ್ರ ವಿ.ಮೇಸ್ತ,ಶ್ರೀ ಸುಬ್ರಹ್ಮಣೇಶ್ವರ ಯುತ್ ಕ್ಲಬ್ ಅಧ್ಯಕ್ಷ ವಿಶ್ವನಾಥ ವಿ.ಮೇಸ್ತ, ಕಾರ್ಯದರ್ಶಿ ರಾಮದಾಸ ಕೆ.ಮೇಸ್ತ, ಗುಜ್ಜಾಡಿ ಗ್ರಾ.ಪಂ. ಸದಸ್ಯ ಹರೀಶ ಮೇಸ್ತ, ಬೆಣ್ಗೆರೆ ಖಾರ್ವಿ ಸಮಾಜದ ಅಧ್ಯಕ್ಷ ಮೋಹನ ಖಾರ್ವಿ, ಕಂಚುಗೋಡು ಶ್ರೀ ರಾಮ ಮಂದಿರ ಅಧ್ಯಕ್ಷ ನಾಗೇಶ ಖಾರ್ವಿ, ಗಂಗೊಳ್ಳಿ ಶ್ರೀ ಮಹಾಂಕಾಳಿ ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ಶಂಕರ ಖಾರ್ವಿ, ನಾಯಕವಾಡಿ ಶ್ರೀ ಸಂಗಮೇಶ್ವರ ದೇವಸ್ಥಾನದ ಅಧ್ಯಕ್ಷ ರಘುರಾಮ ಟಿ., ಕೃಷ್ಣ ಮೇಸ್ತ, ಉದಯ ಖಾರ್ವಿ ಕೆಂಚುಗೋಡು, ರಾಮನಾಥ ಚಿತ್ತಾಲ್, ಚಾರೋಡಿ ಮೇಸ್ತ ಸಮಾಜದವರು, ವಿವಿಧ ಸಮಾಜದ ಮುಖಂಡರು, ಭಕ್ತರು ಉಪಸ್ಥಿತರಿದ್ದರು.