ಕುಂದಾಪುರ(ಫೆ. 08): ಕರ್ನಾಟಕ ಸರ್ಕಾರಿ ಗ್ರಾಮೀಣ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ (ರಿ) ರಾಜ್ಯ ಘಟಕ ಹುಬ್ಬಳ್ಳಿ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಘಟಕ ಮತ್ತು ನೆಲಮಂಗಲ ತಾಲೂಕು ಘಟಕ ಇವರ ಸಂಯುಕ್ತಾಶ್ರಯದಲ್ಲಿ ಕೊಡಮಾಡುವ ರಾಜ್ಯ ಮಟ್ಟದ ಗ್ರಾಮೀಣ ಶಿಕ್ಷಕ ರತ್ನ ಪ್ರಶಸ್ತಿಗೆ ಶ್ರೀ ಶಿವಾನಂದ್ ಕೋಟೇಶ್ವರ ಭಾಜನರಾಗಿದ್ದಾರೆ.
ಇವರು ಇಡೂರು ಮತ್ತು ಮುದೂರಿನ ಬೆಳ್ಕಲ್ ಶಾಲೆಯಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸಿ ವಿಧ್ಯಾರ್ಥಿಗಳ ಮತ್ತು ಊರಿನವರ ನೆಚ್ಚಿನ ಅಧ್ಯಾಪಕರಾಗಿದ್ದರು. ಹಲವು ವರ್ಷಗಳಿಂದ ಶಿಕ್ಷಣ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಇವರಿಗೆ ಪ್ರಶಸ್ತಿ ನೀಡಿರುವುದು ಶಿಕ್ಷಣ ಕ್ಷೇತ್ರಕ್ಕೆ ಅವರು ಸಲ್ಲಿಸಿರುವ ಸೇವೆಗೆ ಸಾರ್ಥಕತೆ ದೊರಕಿದಂತಾಗಿದೆ. ಇವರ ಮಾರ್ಗದರ್ಶನ ಇನ್ನಷ್ಟು ವಿದ್ಯಾರ್ಥಿಗಳಿಗೆ ಸಿಕ್ಕಿ ಬಾಳು ಬೆಳಗುವಂತಾಗಲಿ ಹಾಗೂ ಇನ್ನಷ್ಟು ಪ್ರಶಸ್ತಿಗಳು ಇವರನ್ನು ಅರಸಿ ಬರಲಿ ಎಂದು ಅವರ ವಿಧ್ಯಾರ್ಥಿಗಳು ಮತ್ತು ಪೋಷಕರು ಹಾರೈಸಿದ್ದಾರೆ.