ಅoಪಾರು(ಫೆ,13): ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಆಂಪಾರು ಮೂರು ಕೈ ಶಾಲೆಯಲ್ಲಿ ಸ್ಮಾರ್ಟ್ ಕ್ಲಾಸ್ ಉದ್ಘಾಟನಾ ಕಾರ್ಯಕ್ರಮ ಫೆಬ್ರವರಿ 08 ರಂದು ನಡೆಯಿತು.
ಶಾಲೆಯ ಎಸ್ ಡಿ ಎಮ್ ಸಿ ಅಧ್ಯಕ್ಷರಾದ ಶ್ರೀಮತಿಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಸಭಾ ಕಾರ್ಯಕ್ರಮವನ್ನು ಪಂಚಾಯಿತಿ ಅಧ್ಯಕ್ಷರಾದ ಶ್ರೀಯುತ ಗೋಪಾಲಕೃಷ್ಣ ಕಿಣಿ ಇವರು ಉದ್ಘಾಟಿಸಿದರು. ಸ್ಮಾರ್ಟ್ ಕ್ಲಾಸ್ ಶ್ರೀಯುತ ತಿಮ್ಮಪ್ಪ ಶೆಟ್ಟಿ ಉದ್ಘಾಟಿಸಿದರು. ಸಿದ್ವಿನ್ ಔಟೋ ಟೆಕ್ ಕಂಪನಿ ಬೆಂಗಳೂರು ಇಲ್ಲಿಯ ಇಂಜಿನಿಯರ್ ಮನೀಶ್ ನಾಯಕ್ ಕಂಪನಿಯ ಕಾರ್ಯ ಚಟುವಟಿಕೆಗಳ ಬಗ್ಗೆ ತಿಳಿಸಿದರು.
ಕಂಪನಿಯH.R ರೇಣುಕಾ, ಹಾಗೂ ಅಡ್ಮಿನ್ ಸ್ಪೂರ್ತಿ ಶೆಟ್ಟಿ, ಇವರು ಸ್ಮಾರ್ಟ್ ಟಿವಿ ಉಪಯೋಗಿಸಿಕೊಂಡು ಅದರ ಪ್ರಯೋಜನವನ್ನು ಪಡೆಯುವಂತೆ ತಿಳಿಸಿದರು. ಜೊತೆಗೆ ಒಂದು ಲ್ಯಾಪ್ಟಾಪ್ ಅನ್ನು ಸಹ ಶಾಲೆಗೆ ಕೊಡುಗೆಯಾಗಿ ನೀಡಿದರು .ಕಾರ್ಯಕ್ರಮದಲ್ಲಿ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಶ್ರೀ ಸದಾನಂದ ಕಿಣಿ, ಗ್ರಾಮ ಪಂಚಾಯಿತಿ ಸದಸ್ಯರಾದ ಶ್ರೀ ಅಶೋಕ, ಶ್ರೀ ಕಿರಣ ಹೆಗಡೆ, ಶ್ರೀ ನವೀನ್ ಶೆಟ್ಟಿ, ಸಂಜಯ್ ಗಾಂಧಿ ಪ್ರೌಢಶಾಲೆ ಮುಖ್ಯ ಶಿಕ್ಷಕರಾದ ಶ್ರೀ ಉದಯ,ಸಮೂಹ ಸಂಪನ್ಮೂಲ ವ್ಯಕ್ತಿಯಾದ ಶ್ರೀ ರಾಘವೇಂದ್ರ ಉಪಸ್ಥಿತರಿದ್ದರು.
ಶಾಲಾ ಶಿಕ್ಷಕಿಯಾದ ಶ್ರೀಮತಿ ಲತಾ ಇವರು ಸ್ವಾಗತಿಸಿದರು. ಮುಖ್ಯ ಶಿಕ್ಷಕಿ ಶ್ರೀಮತಿ ಸಂಧ್ಯಾ ಇವರು ಪ್ರಸ್ತಾವಿಕ ಮಾತುಗಳನ್ನಾಡಿದರು. ಶಿಕ್ಷಕಿ ಶ್ರೀಮತಿ ಜ್ಯೋತಿ ಕಾರ್ಯಕ್ರಮ ನಿರೂಪಿಸಿದರು. ಅತಿಥಿ ಶಿಕ್ಷಕಿಯಾದ ಲತಾ ಇವರು ಸಾಂಸ್ಕೃತಿಕ ಕಾರ್ಯಕ್ರಮವನ್ನು ನಿರೂಪಿಸಿದರು.