ಕುಂದಾಪುರ(ಫೆ.21): ಅಂಪಾರು ಮೂರುಕೈ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎಫ್ ಎಲ್ ಎನ್ ಕಲಿಕಾ ಹಬ್ಬ ಇತ್ತೀಚೆಗೆ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷ ಸ್ಥಾನವನ್ನು ಎಸ್ ಡಿ ಎಮ್ ಸಿ ಅಧ್ಯಕ್ಷರಾದ ಶ್ರೀಮತಿ ವಹಿಸಿದ್ದರು.
ಗ್ರಾಮ ಪಂಚಾಯತ ಅಧ್ಯಕ್ಷರಾದ ಶ್ರೀ ಗೋಪಾಲಕೃಷ್ಣ ಕಿಣಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಗ್ರಾಮ ಪಂಚಾಯತ್ ಸದಸ್ಯರಾದ ಶ್ರೀ ನವೀನ್ ಶೆಟ್ಟಿ ಹೊಸಿಮನೆ , ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಶ್ರೀ ಸದಾನಂದ ಕಿಣಿ, ಶ್ರೀತಿಮ್ಮಪ್ಪ ಶೆಟ್ಟಿ, ಅಂಪಾರು ವೃತ್ತದ ಶಿಕ್ಷಣ ಸಂಯೋಜಕರಾದ ಶ್ರೀ ಶಂಕರ್, ಕ್ಷೇತ್ರ ಸಂಪನ್ಮೂಲ ವ್ಯಕ್ತಿ ಮಿಲ್ಟನ್ ಕ್ರಾಸ್ತಾ, ಶಂಕರ ನಾರಾಯಣ ಕ್ಲಸ್ಟರ್ ಸಮೂಹ ಸಂಪನ್ಮೂಲ ವ್ಯಕ್ತಿ ಶ್ರೀ ಶಂಕರ, ಅಂಪಾರು ಕ್ಲಸ್ಟರ್ ಸಮೂಹ ಸಂಪನ್ಮೂಲ ವ್ಯಕ್ತಿ ಶ್ರೀ ರಾಘವೇಂದ್ರ ಉಪಸ್ಥಿತರಿದ್ದರು.
ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಸಂಧ್ಯಾ ಇವರು ಸ್ವಾಗತಿಸಿ, ಸಮೂಹ ಸಂಪನ್ಮೂಲ ವ್ಯಕ್ತಿ ಪ್ರಾಸ್ತಾವಿಕ ಮಾತುಗಳಾಡಿದರು . ಶಿಕ್ಷಕಿಯರಾದ ಶ್ರೀಮತಿ ಲತಾ ಕಾರ್ಯಕ್ರಮ ನಿರೂಪಿಸಿ ಶ್ರೀಮತಿ ಜ್ಯೋತಿ ವಂದಿಸಿದರು. ಅತಿಥಿ ಶಿಕ್ಷಕಿ ಲತಾ ಸಹಕರಿಸಿದರು.