ಕುಂದಾಪುರ(ಫೆ.20): ಭಾರತೀಯ ಪರಂಪರೆಯಲ್ಲಿ ಗೋವಿಗೆ ಮಹತ್ತರವಾದ ಸ್ಥಾನವಿದೆ. ಭಾರತೀಯ ದೇಸಿಯ ಗೋ ತಳಿಗಳಲ್ಲಿ ಪಂಚಗವ್ಯ ಔಷಧೀಯ ಗುಣಗಳಿದೆ. ವಿದ್ಯಾರ್ಥಿಗಳು ದಿನನಿತ್ಯದ ಬಳಕೆಯಲ್ಲಿ ದೇಸಿ ಗೋ ಉತ್ಪನ್ನಗಳನ್ನು ಹೆಚ್ಚು ಬಳಸಬೇಕಾಗಿರುವುದು ವರ್ತಮಾನದ ತುರ್ತು ಎಂದು ಕಪಿಲೆ ಗೋ ಸಮೃದ್ಧಿ ಟ್ರಸ್ಟ್ ಇದರ ಪ್ರವರ್ತಕರಾದ ಕುಮಾರ್ ಎಸ್. ಕಾಂಚನ್ ಹೇಳಿದರು.
ಅವರು ಕಾಲೇಜಿನ ಕನ್ನಡ ವಿಭಾಗ ಹಾಗೂ ರೋವರ್ಸ್ ಮತ್ತು ರೇಂಜರ್ಸ್ ಘಟಕಗಳ ಜಂಟಿ ಆಶ್ರಯದಲ್ಲಿ ನಡೆದ ಉಪನ್ಯಾಸ ಕಾರ್ಯಕ್ರಮದಲ್ಲಿ “ದೇಸಿ ಗೋ ಉತ್ಪನ್ನಗಳು” ಎಂಬ ವಿಷಯದ ಕುರಿತು ಮಾತನಾಡಿದರು. ಇದೇ ಸಂದರ್ಭದಲ್ಲಿ ಅವರು ದೇಸಿ ಗೋ ತಳಿಗಳಿಂದ ತಯಾರಿಸಿದ ವಿವಿಧ ಉತ್ಪನ್ನಗಳ ಕುರಿತು ಮಾಹಿತಿ ನೀಡಿದರು.
ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ ಅಧ್ಯಕ್ಷತೆಯನ್ನು ವಹಿಸಿದ್ದರು. ಕಾಲೇಜಿನ ಉಪ-ಪ್ರಾಂಶುಪಾಲರು ಹಾಗೂ ಕನ್ನಡ ವಿಭಾಗದ ಮುಖ್ಯಸ್ಥರಾದ ಡಾ| ಚೇತನ್ ಶೆಟ್ಟಿ ಕೋವಾಡಿ ಸ್ವಾಗತಿಸಿ, ಪ್ರಸ್ತಾವಿಸಿದರು. ರೋವರ್ ಸ್ಕೌಟ್ ಲೀಡರ್ ಪ್ರವೀಣ್ ಮೊಗವೀರ್ ಗಂಗೊಳ್ಳಿ ಸಂಪನ್ಮೂಲ ವ್ಯಕ್ತಿಯನ್ನು ಪರಿಚಯಿಸಿದರು. ಕನ್ನಡ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಸುಕುಮಾರ ಶೆಟ್ಟಿ ಕಮಲಶಿಲೆ ವಂದಿಸಿದರು. ರೇಂರ್ಸ್ ಲೀಡರ್ ಪೂಜಾ ಕುಂದರ್ ನಿರೂಪಿಸಿದರು.