ಕುಂದಾಪುರ (ಫೆ.20): ಜೀವನ ಮೌಲ್ಯಗಳು ಕಲಿಯುವುದಲ್ಲ, ಪಾಲಿಸುವಂತದದ್ದು. ಹೀಗಾಗಿ ತಂದೆ, ತಾಯಿ, ಗುರುಗಳು ಜೀವನದ ಅತ್ಯಮೂಲ್ಯ ಮೌಲ್ಯ. ಅವರ ಆದರ್ಶ ಬದುಕು ವಿದ್ಯಾರ್ಥಿಗಳ ಬದುಕಿಗೆ ದಾರಿದೀಪವಾಗಬೇಕು. ಅದರೊಂದಿಗೆ ವ್ಯಕ್ತಿತ್ವಪೂರ್ಣ ಜೀವನವನ್ನು ಪ್ರಾಮಾಣಿಕವಾಗಿ ರೂಢಿಸಿಕೊಂಡಾಗ ವ್ಯಕ್ತಿಯ ಬದುಕಿಗೆ ಬೆಲೆ ಬರುತ್ತದೆ ಎಂದು ಆಳ್ವಾಸ್ ಕಾಲೇಜಿನ ಸಂಸ್ಕೃತ ವಿಭಾಗದ ಮುಖ್ಯಸ್ಥರಾದ ಡಾ| ವಿನಾಯಕ್ ಭಟ್ ಹೇಳಿದರು.
ಇವರು ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿ ಆಯೋಜಿಸಿದ “ಜೀವನ ಮೌಲ್ಯ” ವಿಶೇಷ ಉಪನ್ಯಾಸದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು.
ಈ ಸಂದರ್ಭ ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿ, ಇಂದಿನ ಶಿಕ್ಷಣ ಪದ್ಧತಿಯಲ್ಲಿ ಮೌಲ್ಯ ಶಿಕ್ಷಣವನ್ನು ಅಳವಡಿಸಿಕೊಳ್ಳುವುದು ಅಗತ್ಯ ಎಂದರು.
ಕಾಲೇಜಿನ ಉಪ-ಪ್ರಾಂಶುಪಾಲರಾದ ಡಾ| ಚೇತನ್ ಶೆಟ್ಟಿ ಕೋವಾಡಿ, ಆಡಳಿತ ನಿಕಾಯಕರು ಹಾಗೂ ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ಶ್ರೀ ರಕ್ಷಿತ್ ರಾವ್ ಗುಜ್ಜಾಡಿ, ಶ್ರೀಮತಿ ರೇಷ್ಮಾ ಶೆಟ್ಟಿ ಉಪಸ್ಥಿತರಿದ್ದರು. ವಿದ್ಯಾರ್ಥಿಗಳಾದ ಕಾವ್ಯ ಸ್ವಾಗತಿಸಿ, ಸ್ವಾತಿ ಅತಿಥಿಗಳನ್ನು ಪರಿಚಯಿಸಿ, ಪ್ರಥ್ವಿ ವಂದಿಸಿ, ಅಮೃತ ಕಾರಂತ್ ನಿರೂಪಿಸಿದರು.