ಬ್ರಹ್ಮಾವರ, (ಫೆ,12): ಇಲ್ಲಿನ ವಡ್ಡರ್ಸೆ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಡೆದ ಕುಂದಾಪುರದ ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕಗಳ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭದಲ್ಲಿ ಸಂಸ್ಥೆಯ ಅಧ್ಯಕ್ಷರಾದ ಶ್ರೀ ಬಿ.ಎಂ. ಸುಕುಮಾರ ಶೆಟ್ಟಿ ಅವರು ಸಮಾರೋಪ ನುಡಿಗಳನ್ನಾಡಿದರು.
ವಿದ್ಯಾರ್ಥಿ ದೆಸೆಯಲ್ಲಿಯೇ ನಾಯಕತ್ವ ಗುಣ, ಸಮಯ ಪ್ರಜ್ಞೆಯನ್ನು ಬೆಳೆಸಿಕೊಳ್ಳಲು ಇಂತಹ ಕ್ಯಾಂಪುಗಳು ದೊಡ್ಡ ಮಟ್ಟದಲ್ಲಿ ಸಹಕಾರಿಯಾಗುತ್ತದೆ. ಶಿಬಿರದ ಯಶಸ್ಸಿಗೆ ಸಹಕರಿಸಿದ ಊರಿನ ಪ್ರತಿಯೊಬ್ಬರ ಶ್ರಮ ಉಲ್ಲೇಖನೀಯ ಎಂದರು.
ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭ ಉದಯ್ ಕುಮಾರ್ ಶೆಟ್ಟಿ ಕೊತ್ತಾಡಿ, ನಿವೃತ್ತ ಶಿಕ್ಷಕ ಬಾಲಕೃಷ್ಣ ಶೆಟ್ಟಿ ವಡ್ಡರ್ಸೆ, ಶ್ರೀ ವೇಣುಗೋಪಾಲ ಶೆಟ್ಟಿ ಬನ್ನಾಡಿ, ವಂಡಾರಿನ ಶ್ರೀ ಕೃಷ್ಣಪ್ರಸಾದ್ ಕ್ಯಾಶ್ಯು ಇಂಡಸ್ಟಿçಯ ಪ್ರವರ್ತಕ ಸಂಪತ್ ಕುಮಾರ್ ಶೆಟ್ಟಿ, ಸಿ.ಎ. ಬ್ಯಾಂಕ್ ಕೋಟದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶರತ್ ಕುಮಾರ್ ಶೆಟ್ಟಿ, ವಡ್ಡರ್ಸೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಪ್ರಕಾಶ್ ಆಚಾರ್, ಗ್ರಾಮ ಪಂಚಾಯತ್ ಸದಸ್ಯ ಕೋಟಿ ಪೂಜಾರಿ, ಸರ್ಕಾರಿ ಪ್ರೌಢಶಾಲೆಯ ಎಸ್.ಡಿ.ಎಮ್.ಸಿ. ಅಧ್ಯಕ್ಷೆ ಉಷಾ ಪೂಜಾರಿ, ಮುಖ್ಯ ಶಿಕ್ಷಕಿ ಗಾಯತ್ರಿ ದೇವಿ ಎಮ್., ಪ್ರಾಕ್ತನ ವಿದ್ಯಾರ್ಥಿ ಅಕ್ಷಯ್ ಶೆಟ್ಟಿ ಕಲ್ಕಟ್ಟೆ, ಎನ್.ಎಸ್.ಎಸ್. ಪ್ರತಿನಿಧಿಗಳಾದ ನಿತೇಶ್ ಕೆ. ಶೇಟ್, ಕೀರ್ತನ, ಆಕಾಶ್ ಬಿ. ಶೆಟ್ಟಿ ಹಾಗೂ ನಿರೀಕ್ಷಾ ಉಪಸ್ಥಿತರಿದ್ದರು.
ಶಿಬಿರಕ್ಕೆ ವಿಶೇಷ ಸಹಕಾರ ನೀಡಿದ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಹಾಗೂ ನ್ಯಾಯವಾದಿ ಉದಯ ಕುಮಾರ್ ಶೆಟ್ಟಿ ಕೊತ್ತಾಡಿ, ವಡ್ಡರ್ಸೆ ಗ್ರಾಮ ಪಂಚಾಯತ್ ಮಾಜಿ ಸದಸ್ಯ ವಿಜಯ್ ಕುಮಾರ್ ಶೆಟ್ಟಿ ಕೊತ್ತಾಡಿ, ಶಿಕ್ಷಕ ವಡ್ಡರ್ಸೆ ಸಂತೋಷ್ ಕುಮಾರ್ ಶೆಟ್ಟಿ, ಮಾಜಿ ಗ್ರಾಮ ಪಂಚಾಯತ್ ಸದಸ್ಯ ಜಯಕರ ಶೆಟ್ಟಿ, ಪ್ರಾಕ್ತನ ವಿದ್ಯಾರ್ಥಿ ಸಂದೀಪ್ ಪೂಜಾರಿ ತ್ರಾಸಿ, ಅಶೋಕ್ ಕುಮಾರ್ ಶೆಟ್ಟಿ ಬನ್ನಾಡಿ, ಪ್ರಭಾಕರ್ ಶೆಟ್ಟಿ ಬನ್ನಾಡಿ, ಸಚಿನ್ ಶೆಟ್ಟಿ ವಡ್ಡರ್ಸೆ, ಮಂಜುಳಾ ವೀರೇಂದ್ರ ಶೆಟ್ಟಿ ಕೊತ್ತಾಡಿ, ವಿನುತಾ ಸದಾನಂದ ಶೆಟ್ಟಿ ಕೊತ್ತಾಡಿ, ಸತೀಶ್ ಕುಂದರ್ ಕೋಣ್ಕಿ ಹಾಗೂ ಪ್ರಾಕ್ತನ ವಿದ್ಯಾರ್ಥಿ ವೀರೇಂದ್ರ ದೇವಾಡಿಗ ಅವರನ್ನು ಗುರುತಿಸಿ ಗೌರವಿಸಲಾಯಿತು.
ಶಿಬಿರದಲ್ಲಿ ಆಯೋಜಿಸಿದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ಶಿಬಿರಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ವಿದ್ಯಾರ್ಥಿ ಕ್ಷೇಮಪಾಲನ ಅಧಿಕಾರಿ ರಕ್ಷಿತ್ ರಾವ್ ಗುಜ್ಜಾಡಿ ಸ್ವಾಗತಿಸಿದರು. ವ್ಯವಹಾರ ಆಡಳಿತ ವಿಭಾಗದ ಸಹ ಪ್ರಾಧ್ಯಾಪಕ ಪ್ರವೀಣ್ ಮೊಗವೀರ ಗಂಗೊಳ್ಳಿ ಶಿಬಿರದ ವರದಿ ವಾಚಿಸಿದರು. ಉಪಪ್ರಾಂಶುಪಾಲ ಹಾಗೂ ಶಿಬಿರಾಧಿಕಾರಿ ಡಾ| ಚೇತನ್ ಶೆಟ್ಟಿ ಕೋವಾಡಿ ವಂದಿಸಿದರು, ಶಿಬಿರಾಧಿಕಾರಿ ದೀಪಾ ಪೂಜಾರಿ ಕಾರ್ಯಕ್ರಮ ನಿರೂಪಿಸಿದರು. ಎನ್.ಎಸ್.ಎಸ್. ಸ್ವಯಂ ಸೇವಕಿ ಶ್ರೇಯಾ ಖಾರ್ವಿ ಪ್ರಾರ್ಥಿಸಿದರು.