ಕುಂದಾಪುರ( ಫೆ.24): ಕುಂದಾಪುರ ಎಜುಕೇಷನ್ ಸೊಸೈಟಿಯ ಸುವರ್ಣ ಸಂಭ್ರಮದ ಅಂಗವಾಗಿ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಪ್ರಾಕ್ತನ ವಿದ್ಯಾರ್ಥಿ ಸಂಘದ ವತಿಯಿಂದ ಕಾಲೇಜಿಗೆ ಕೊಡ ಮಾಡಿದ ವೆಹಿಕಲ್ ಶೆಲ್ಟರ್ ಅನ್ನು ಕುಂದಾಪುರದ ನಿವೃತ್ತ ಪ್ರಾಂಶುಪಾಲರಾದ ಡಾ. ಜಿ. ಎಚ್. ಪ್ರಭಾಕರ ಶೆಟ್ಟಿ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಕುಂದಾಪುರ ಎಜುಕೇಷನ್ ಸೊಸೈಟಿಯ ಕಾರ್ಯದರ್ಶಿಗಳಾದ ಸೀತಾರಾಮ ನಕ್ಕತ್ತಾಯ, ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಕೆ. ಉಮೇಶ್ ಶೆಟ್ಟಿ, ಉಪ ಪ್ರಾಂಶುಪಾಲರಾದ ಡಾ| ಚೇತನ್ ಶೆಟ್ಟಿ ಕೋವಾಡಿ, ಪ್ರಾಕ್ತನ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಆದೇಶ ನಾಯಕ್,ಕಾರ್ಯದರ್ಶಿಗಳಾದ ದೀಪಾ ಪೂಜಾರಿ, ಸಂಘದ ಎಲ್ಲಾ ಪದಾಧಿಕಾರಿಗಳು, ಸಂಸ್ಥೆಯ ಬೋಧಕ – ಬೋಧಕೇತರರು ಹಾಗೂ ಪ್ರಾಕ್ತನ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಸಂಘದ ಖಜಾಂಚಿ ಯೋಗೀಶ್ ಶ್ಯಾನುಭೋಗ್ ಕಾರ್ಯಕ್ರಮ ಸ್ವಾಗತಿಸಿ, ನಿರೂಪಿಸಿದರು.