ಕೋಟೇಶ್ವರ( ಫೆ .27): ವಕ್ವಾಡಿ ಫ್ರೆಂಡ್ ವಕ್ವಾಡಿ, ಅಭಯಹಸ್ತ ಚಾರಿಟೇಬಲ್ ಟ್ರಸ್ಟ್ ರಿ. ಉಡುಪಿ, ರಕ್ತನಿಧಿ ವಿಭಾಗ ಕೆಎಂಸಿ ಮಣಿಪಾಲ ಇವರ ಸಹಕಾರದಲ್ಲಿ ಫೆಬ್ರವರಿ 23 ರಂದು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಸಭಾಂಗಣ ವಕ್ವಾಡಿಯಲ್ಲಿ ನಡೆಯಿತು.
ಈ ಸ್ವಯಂಪ್ರೇರಿತ ರಕ್ತದಾನ ಶಿಬಿರವನ್ನು ಮಾಜಿ ಸಚಿವ ಕೆ.ಜಯಪ್ರಕಾಶ್ ಹೆಗ್ಡೆ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ವಕೀಲರಾದ ಸತೀಶ್ಚಂದ್ರ ಕಾಳಾವರ್ಕಾರ್, ಸಂಪತ್ ಕುಮಾರ್ ಶೆಟ್ಟಿ ಶಾನಾಡಿ,ಗಜೇಂದ್ರ ಶೆಟ್ಟಿ ವಕ್ವಾಡಿ, ರಕ್ತದ ಆಪತ್ಬಾಂದವ ಸತೀಶ್ ಸಾಲ್ಯಾನ್ ಮಣಿಪಾಲ್, ಕಿರಣ್ ಶೆಟ್ಟಿ ವಕ್ವಾಡಿ, ಕೀರ್ತಿ ಶೆಟ್ಟಿ ವಕ್ವಾಡಿ ಹಾಗೂ ಇತರರು ಉಪಸ್ಥಿತರಿದ್ದರು. ಈ ಯಶಸ್ವಿ ರಕ್ತದಾನ ಶಿಬಿರದಲ್ಲಿ 104 ಯೂನಿಟ್ ರಕ್ತವನ್ನು ಸಂಗ್ರಹಿಸಲಾಯಿತು.