ಕುಂದಾಪುರ (ಫೆ. 25): ಇನ್ಸ್ಟಿಟ್ಯೂಟ್ ಆಫ್ ಕಂಪನಿ ಸೆಕ್ರೆಟರಿಸ್ ಆಫ್ ಇಂಡಿಯಾ ನಡೆಸುವ ಎಕ್ಸಿಕ್ಯೂಟಿವ್ ಗ್ರೂಪ್ 1 ಪರೀಕ್ಷೆಯಲ್ಲಿ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು ಪ್ರಥಮ ಹಂತದಲ್ಲಿಯೇ ಉತ್ಕೃಷ್ಟ್ಟ ಸಾಧನೆಗೈದಿದ್ದಾರೆ.
ಜಪ್ತಿಯ ಶಶಿಧರ ಉಡುಪ ಹಾಗೂ ಕಾವೇರಿ ಉಡುಪ ಅವರ ಪುತ್ರನಾದ ಶ್ರೀಕಾಂತ್ ಉಡುಪ ಹಾಗೂ ಶಿರೂರಿನ ರಾಜು ಪೂಜಾರಿ ಹಾಗೂ ಸುಶೀಲ ಪೂಜಾರಿ ಅವರ ಪುತ್ರನಾದ ನಿಖಿಲ್ ಆರ್. ಪೂಜಾರಿ ಇವರು ಸಿ.ಎಸ್. ಎಕ್ಸಿಕ್ಯೂಟಿವ್ ಗ್ರೂಪ್ 1 ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದ್ದಾರೆ.
ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು ಹಾಗೂ ವೀ ರೀಚ್ ಸಂಸ್ಥೆಯ ಪಠ್ಯ ಪ್ರವಚನ, ಮಧ್ಯಂತರ ಮಾದರಿ ಪರೀಕ್ಷೆ, ಹಾಗೂ ನುರಿತ ತರಬೇತುದಾರರಿಂದ ತರಬೇತಿ, ಸಲಹೆ ಮತ್ತು ಮಾರ್ಗದರ್ಶನ ಪಡೆದು ವಿದ್ಯಾರ್ಥಿಗಳು ಈ ಸಾಧನೆಗೈದಿದ್ದಾರೆ.
ಸಾಧಕ ವಿದ್ಯಾರ್ಥಿಗಳಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ-ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.