ಗುಜ್ಜಾಡಿ(ಮಾ.5): ಇಲ್ಲಿನ ಗುಹೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ನೂತನ ಅಧ್ಯಕ್ಷರಾಗಿ ರಾಜು ಮೆಂಡನ್ ತ್ರಾಸಿ ಆಯ್ಕೆಯಾಗಿದ್ದಾರೆ.
ಹಲವಾರು ಸಂಘ ಸಂಸ್ಥೆ ಗಳಲ್ಲಿ ,ಧಾರ್ಮಿಕ ಹಾಗೂ ಸಾಮಾಜಿಕ ಕ್ಷೇತ್ರ ದಲ್ಲಿ ಅಪಾರ ಸೇವೆ ಸಲ್ಲಿಸಿರುವ ಇವರು ತ್ರಾಸಿ ಗ್ರಾಮ ಪಂಚಾಯತ್ ನ ಸದಸ್ಯರಾಗಿ ರಾಜಕೀಯ ಕ್ಷೇತ್ರದಲ್ಲೂ ಗುರುತಿಸಿಕೊಂಡಿದ್ದಾರೆ.
ಮೊಗವೀರ ಮಹಾಜನ ಸೇವಾ ಸಂಘ (ರಿ,) ಮುಂಬೈ ,ಬಗ್ವಾಡಿ ಹೋಬಳಿ ಕುಂದಾಪುರ ಶಾಖಾ ಸದಸ್ಯರಾಗಿ, ಮೊಗವೀರ ಯುವ ಸಂಘಟನೆ (ರಿ) ಉಡುಪಿ ಜಿಲ್ಲೆ ,ಹೆಮ್ಮಾಡಿ ಘಟಕದ ಸಲಹೆಗಾರರಾಗಿಯೂ ಸೇವೆ ಸಲ್ಲಿಸುತಿದ್ದಾರೆ.