ಕುಂದಾಪುರ;(ಮಾ,05): ಸಿ ಎ ಫೌಂಡೇಶನ್ ಪರೀಕ್ಷೆ 2025ರಲ್ಲಿ ಜನತಾ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಉತ್ತಮ ಅಂಕಗಳನ್ನು ಪಡೆದು ಸಾಧನೆಗೈದಿದ್ದಾರೆ.
ವಿದ್ಯಾರ್ಥಿಗಳಾದ ವಿಘ್ನೇಶ್ 228 ಅಂಕಗಳು,ಕೌಶಲ್ ಆಚಾರ್ 209 ಅಂಕಗಳು,ರಿತೇಶ್ ಮೊಗವೀರ 208 ಅಂಕಗಳನ್ನು ಪಡೆಯುವುದರ ಮೂಲಕ ಮುಂದಿನ ಹಂತಕ್ಕೆ ತೇರ್ಗಡೆಯಾಗಿರುತ್ತಾರೆ. ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅತ್ಯುತ್ತಮ ತರಬೇತಿ ನೀಡುತ್ತಾ ಪದವಿಪೂರ್ವ ಶಿಕ್ಷಣಕ್ಕೆ ಸಂಬಂಧಿಸಿದ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಅತ್ಯುನ್ನತ ಸಾಧನೆಯೊಂದಿಗೆ ಕಾಲೇಜು ವಿಶೇಷವಾಗಿ ಗುರುತಿಸಿಕೊಂಡಿದೆ.
ಸಾಧಕ ವಿದ್ಯಾರ್ಥಿಗಳಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ-ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.