ಕುಂದಾಪುರ (ಮಾ.12): ಕುಂದಾಪುರದ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಎನ್.ಎಸ್.ಎಸ್. ಸ್ವಯಂಸೇವಕಿ, ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಪ್ರತಿಭೆ ಅಂತಿಮ ಬಿ.ಬಿ.ಎ. ವಿದ್ಯಾರ್ಥಿನಿ ಶ್ರದ್ಧಾ ಆರ್. ಮಂಗಳೂರು ವಿಶ್ವವಿದ್ಯಾನಿಲಯದ ಶೈಕ್ಷಣಿಕ ಮಂಡಳಿಗೆ ವಿದ್ಯಾರ್ಥಿ ಪ್ರತಿನಿಧಿಯಾಗಿ ಆಯ್ಕೆಯಾಗಿದ್ದಾರೆ.
ಇವರಿಗೆ ಸಂಸ್ಥೆಯ ಅಧ್ಯಕ್ಷರಾದ ಶ್ರೀ ಬಿ.ಎಂ. ಸುಕುಮಾರ ಶೆಟ್ಟಿ, ಆಡಳಿತ ಮಂಡಳಿಯವರು, ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ, ಬೋಧಕ-ಬೋಧಕೇತರ ವೃಂದ ಹಾಗೂ ವಿದ್ಯಾರ್ಥಿಗಳು ಅಭಿನಂದನೆ ಸಲ್ಲಿಸಿದ್ದಾರೆ.