ಕುಂದಾಪುರ (ಮಾ,12): ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗದ ವತಿಯಿಂದ ವಿ-ಗ್ರೋ ಬ್ಯುಸಿನೆಸ್ ಡೇ ಕಾರ್ಯಕ್ರಮ ಮಾರ್ಚ್ 17, 20 ಮತ್ತು 22 ರಂದು ಮೂರು ಹಂತದಲ್ಲಿ ನಡೆಯಲಿದೆ.
ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ, ಉದ್ಯಮಶೀಲತಾ ಕೌಶಲ್ಯಗಳನ್ನು ಬೆಳೆಸಿ ಜಾಗತಿಕ ಮಾರುಕಟ್ಟೆಯ ಪ್ರಾಯೋಗಿಕ ಜ್ಞಾನವನ್ನು ಪಡೆದರೆ ಭವಿಷ್ಯದಲ್ಲಿ ದೊಡ್ಡ ಉದ್ಯಮಿಗಳಾಗಬಹುದು ಎಂಬ ನಿಟ್ಟಿನಲ್ಲಿ ಈ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ. ಮೊದಲನೇ ಹಂತ ವ್ಯವಹಾರ ಯೋಜನೆ ಪ್ರಸ್ತುತಿ, ಎರಡನೆ ಹಂತ ವ್ಯವಹಾರ ಕೌಶಲ್ಯ ಪ್ರದರ್ಶನ, ಮೂರನೇ ಹಂತದಲ್ಲಿ ವ್ಯವಹಾರ ಪಟ್ಟಿ ವಿಶ್ಲೇಷಣೆ ನಡೆಯಲಿದೆ ಎಂದು ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ ಇವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.