ಕುಂದಾಪುರ : ಕರ್ನಾಟಕ ರಾಜ್ಯ ಮೀನುಗಾರಿಕಾ ಮತ್ತು ಬಂದರು ಸಚಿವರಾಗಿ ಅಧಿಕಾರ ಸ್ವೀಕರಿಸಿರುವ ಎಸ್. ಅಂಗಾರ ರವರು ಕುಂದಾಪುರ ತಾಲೂಕಿನ ಅತಿದೊಡ್ಡ ಮೀನುಗಾರಿಕೆ ಬಂದರಾಗಿರುವ ಗಂಗೊಳ್ಳಿ ಬಂದರಿಗೆ ಭೇಟಿ ನೀಡಿದರು.
ಮೀನುಗಾರಿಕೆ ಜಟ್ಟಿ ಕಾಮಗಾರಿಯ ಬಗ್ಗೆ ಸ್ಥಳೀಯ ಮೀನುಗಾರರ ಜೊತೆ ಚರ್ಚೆ ನಡೆಸಿ, ಮೀನುಗಾರರ ಸಮಸ್ಯೆ ಪರಿಹರಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಬೈಂದೂರು ಶಾಸಕ ಬಿ.ಎಮ್. ಸುಕುಮಾರ್ ಶೆಟ್ಟಿ, ಕುಂದಾಪುರ ತಾ.ಪಂ. ಅಧ್ಯಕ್ಷೆ ಇಂದಿರಾ ಶೆಟ್ಟಿ, ಸದಸ್ಯ ಸುರೇಂದ್ರ ಖಾರ್ವಿ, ಗಂಗೊಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷ ಶ್ರೀನಿವಾಸ ಖಾರ್ವಿ,ಗುಜ್ಜಾಡಿ ಗ್ರಾ.ಪಂ. ಮಾಜಿ ಅಧ್ಯಕ್ಷ ಹರೀಶ ಮೇಸ್ತ, ಗಂಗೊಳ್ಳಿ ಮೀನುಗಾರರ ಪ್ರಾಥಮಿಕ ಸಹಕಾರಿ ಸಂಘದ ಅಧ್ಯಕ್ಷ ಸದಾಶಿವ ಖಾರ್ವಿ, ನಿರ್ದೇಶಕ ಚಂದ್ರ ಖಾರ್ವಿ, ಗಂಗೊಳ್ಳಿ ಪೊಲೀಸ್ ಠಾಣೆ ಉಪ ನಿರೀಕ್ಷಕ ಭೀಮಾಶಂಕರ ಎಸ್, ರಾಘವೇಂದ್ರ ಪೈ, ಸಂದೀಪ ಖಾರ್ವಿ, ಅಶೋಕ ಪೂಜಾರಿ ಹಾಗೂ ಸ್ಥಳೀಯ ಮೀನುಗಾರರು ಉಪಸ್ಥಿತರಿದ್ದರು.