ಬಗ್ವಾಡಿ (ಏ. 09): ಕುಂದಾಪುರದ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಬಗ್ವಾಡಿ ಶ್ರೀ ಮಹಿಷಾಸುರಮರ್ದಿನಿ ದೇವಸ್ಥಾನದ ಬ್ರಹ್ಮರಥೋತ್ಸವ ಇದೇ ಏಪ್ರಿಲ್ 12ರ ಶನಿವಾರದಂದು ನಡೆಯಲಿದ್ದು , ರಥೋತ್ಸವದ ಪ್ರಯುಕ್ತ ಸಂಜೆ 7 ರಿಂದ ವಿವಿಧ ಸಾಂಸ್ಕೃತಿ ಕಾರ್ಯಕ್ರಮ ಹಾಗೂ ರಾಜ್ಯಮಟ್ಟದ ನೃತ್ಯ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗಿದೆ.
ರಾಜ್ಯದ ವಿವಿಧ ಭಾಗಗಳಿಂದ ಪ್ರಖ್ಯಾತ ನೃತ್ಯ ತಂಡಗಳು ಈ ಸ್ಪರ್ಧೆಯಲ್ಲಿ ಭಾಗವಹಿಸಲಿದೆ ಎಂದು ಶ್ರೀ ಮಹಿಷಾಸುರ ಮರ್ದಿನಿ ಸಾಂಸ್ಕೃತಿಕ ಬಳಗ ಪ್ರಕಟಣೆಯಲ್ಲಿ ತಿಳಿಸಿದೆ.