ಬಗ್ವಾಡಿ(ಎ. 14): ಬಗ್ವಾಡಿ ಶ್ರೀ ಮಹಿಷಾಸುರ ಮರ್ದಿನಿ ದೇಗುಲದ ಬ್ರಹ್ಮರಥೋತ್ಸವದ ಪ್ರಯುಕ್ತ ಬಗ್ವಾಡಿ ಉತ್ಸವ”ದ ಶೀರ್ಷಿಕೆಯಡಿಯಲ್ಲಿ ರಾಜ್ಯಮಟ್ಟದ ನೃತ್ಯ ಸ್ಪರ್ಧೆ ಹಾಗೂ ಸಾಂಸ್ಕೃತಿಕ ವೈಭವ ಹಮ್ಮಿಕೊಂಡಿರುವುದು ಶ್ಲಾಘನೀಯ. ಇದು ರಥೋತ್ಸವದ ಸಾಂಸ್ಕೃತಿಕ ಮೆರುಗನ್ನು ಹೆಚ್ಚಿಸುತ್ತದೆ. ಮುಂದಿನ ದಿನಗಳಲ್ಲಿಯೂ ಸಹ ಇದೇ ರೀತಿಯ ಉತ್ತಮ ಕಾರ್ಯಗಳು ನಿಮ್ಮಿಂದಾಗಲಿ ಎಂದು ಗೀತಾನಂದ ಫೌಂಡೇಶನ್ ಇದರ ಪ್ರವರ್ತಕರಾದ ಶ್ರೀ ಆನಂದ ಸಿ ಕುಂದರ್ ಹೇಳಿದರು.
ಅವರು ಶ್ರೀ ಮಹಿಷಾಸುರ ಮರ್ದಿನಿ ಸಾಂಸ್ಕೃತಿಕ ಬಳಗ ಇವರ ವತಿಯಿಂದ ರಥೋತ್ಸವದ ಪ್ರಯುಕ್ತ ಪ್ರಥಮ ಬಾರಿಗೆ ಹಮ್ಮಿಕೊಂಡ ರಾಜ್ಯಮಟ್ಟದ ನೃತ್ಯ ಸ್ಪರ್ಧೆ ಹಾಗೂ ಸಾಂಸ್ಕೃತಿಕ ವೈಭವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಕೆ. ಏನ್. ಇ. ಕೇಟರಿಂಗ್ ಬೆಂಗಳೂರು ಇದರ ಮಾಲೀಕರಾದ ಶ್ರೀ ಕೇಶವ್ ಕಾಂಚನ್ ಟ್ರೋಫಿ ಅನಾವರಣಗೈದರು.
ಮೊಗವೀರ ಮಹಾಜನ ಸೇವಾ ಸಂಘ (ರಿ.)ಬಗ್ವಾಡಿ ಹೋಬಳಿ, ಕುಂದಾಪುರ ಶಾಖೆಯ ಅಧ್ಯಕ್ಷರಾದ ಶ್ರೀ ಉದಯ್ ಕುಮಾರ್ ಹಟ್ಟಿಯಂಗಡಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಮೊಗವೀರ ಮಹಾಜನ ಸೇವಾ ಸಂಘ (ರಿ.)ಬಗ್ವಾಡಿ ಹೋಬಳಿ ಮುಂಬೈ ಇದರ ಅಧ್ಯಕ್ಷರಾದ ಶ್ರೀ ರಾಜು ಮೆಂಡನ್ ವಂಡ್ಸೆ,ಶೆಫ್ ಟಾಕ್ ಫುಡ್ & ಹಾಸ್ಪಿಟಲಿಟಿ ಸಂಸ್ಥೆಯ ಮ್ಯಾನೇಜಿಂಗ್ ಡೈರೆಕ್ಟರ್ ಶ್ರೀ ಗೋವಿಂದ ಬಾಬು ಪೂಜಾರಿ, ಧೃತಿ ಸರ್ಜಿಕಲ್ ಸೊಲ್ಯೂಷನ್ಸ್ ಪ್ರೈವೇಟ್ ಲಿಮಿಟೆಡ್ ಇದರ ಮ್ಯಾನೆಜಿಂಗ್ ಡೈರೆಕ್ಟರ್ ಶರತ್ ಶೆಟ್ಟಿ ಉಪ್ಪುಂದ, ಚಿನ್ಮಯ್ ಆಸ್ಪತ್ರೆ ಕುಂದಾಪುರ ಇದರ ವೈದ್ಯಕೀಯ ನಿರ್ದೇಶಕರಾದ ಡಾ ಉಮೇಶ್ ಪುತ್ರನ್,ಮೊಗವೀರ ಮಹಾಜನ ಸೇವಾ ಸಂಘ (ರಿ.)ಬಗ್ವಾಡಿ ಹೋಬಳಿ, ಕುಂದಾಪುರ ಶಾಖೆಯ ಮಾಜಿ ಅಧ್ಯಕ್ಷರಾದ ಎಮ್. ಎಮ್. ಸುವರ್ಣ, ಕಾರ್ಯದರ್ಶಿ ಪ್ರಭಾಕರ ಏನ್. ಸೇನಾಪುರ, ಉಚ್ಚಿಲ ದಸರಾ ಮಹೋತ್ಸವ ಸಮಿತಿಯ ಅಧ್ಯಕ್ಷರಾದ ಶ್ರೀ ವಿನಯ್ ಕರ್ಕೇರ, ಅಂತರಾಷ್ಟ್ರೀಯ ಖ್ಯಾತಿಯ ಜಾದುಗಾರ ಪ್ರಕಾಶ್ ಹೆಮ್ಮಾಡಿ, ಮೊಗವೀರ ಯುವ ಸಂಘಟನೆ(ರಿ.) ಉಡುಪಿ ಜಿಲ್ಲೆ ಇದರ ಸಲಹೆಗಾರರ ರಮೇಶ್ ವಿ. ಕುಂದರ್ ಕೋಟ, ಮಯೂರ ಬಾರ್ ಅಂಡ್ ರೆಸ್ಟೋರೆಂಟ್ ಕಾಪು ಇದರ ಮಾಲೀಕರಾದ ಶ್ರೀ ರವೀಂದ್ರ ರಟ್ಟಾಡಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಶ್ರೀ ಲೋಹಿತಾಶ್ವ ಆರ್ ಕುಂದರ್ ಕಾರ್ಯಕ್ರಮವನ್ನು ನಿರೂಪಿಸಿ ವಂದಿಸಿದರು. ಈ ರಾಜ್ಯಮಟ್ಟದ ನೃತ್ಯ ಸ್ಪರ್ಧೆಯಲ್ಲಿ ನಾಟ್ಯ ಡಾನ್ಸ್ ಅಕಾಡೆಮಿ ಕೋಟೇಶ್ವರ ಪ್ರಥಮ ಸ್ಥಾನ ಪಡೆದುಕೊಂಡಿತು. ಹಾಗೆ ಸೃಷ್ಟಿ ನ್ರತ್ಯ ಕಲಾ ಕುಟೀರ ಉಡುಪಿ ದ್ವಿತೀಯ ಸ್ಥಾನ,ಟ್ವಿಸ್ಟರ್ ಡಾನ್ಸ್ ಅಕಾಡೆಮಿ ಮೂಡಬಿದ್ರಿ ತೃತೀಯ ಸ್ಥಾನ ಪಡೆದುಕೊಂಡಿತು.