ಕುಂದಾಪುರ, (ಎ 15): ಮಂಗಳೂರು ವಿಶ್ವವಿದ್ಯಾನಿಲಯ ಅಂತರ್-ಕಾಲೇಜು ಮಟ್ಟದ ವಾರ್ಷಿಕ ಸಂಚಿಕೆ ಸ್ಪರ್ಧೆಯಲ್ಲಿ ಗಮನ ಸೆಳೆದ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ 2023-24ನೇ ಸಾಲಿನ ವಾರ್ಷಿಕ ಸಂಚಿಕೆ ‘ಶಿಖರ’ವನ್ನು ಕೋಟ ವಿವೇಕ ಪದವಿ ಪೂರ್ವ ಕಾಲೇಜಿನ ನಿವೃತ್ತ ಉಪನ್ಯಾಸಕ ಶ್ರೀ ಶ್ರೀನಿವಾಸ ಸೋಮಯಾಜಿಯವರು ಅನಾವರಣಗೊಳಿಸಿ, ಶುಭ ಹಾರೈಸಿದರು.
ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿಯವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಉಪ-ಪ್ರಾಂಶುಪಾಲರಾದ ಡಾ| ಚೇತನ್ ಶೆಟ್ಟಿ ಕೋವಾಡಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಇಂಗ್ಲೀಷ್ ವಿಭಾಗದ ಪ್ರಾಧ್ಯಾಪಕಿ ರವಿನಾ ಸಿ. ಪೂಜಾರಿ ಸ್ವಾಗತಿಸಿದರು. ವಾಣಿಜ್ಯ ವಿಭಾಗದ ಪ್ರಾಧ್ಯಾಪಕಿ ದೀಪಾ ಪೂಜಾರಿ ಅತಿಥಿಗಳನ್ನು ಪರಿಚಯಿಸಿದರು. ಶಿಖರ ವಾರ್ಷಿಕ ಸಂಚಿಕೆಯ ನಿರ್ವಾಹಕ ಸಂಪಾದಕರಾದ ಶ್ರೀ ಪ್ರವೀಣ್ ಮೊಗವೀರ ಗಂಗೊಳ್ಳಿ ವಂದಿಸಿದರು. ಗಣಕ ವಿಜ್ಞಾನ ವಿಭಾಗದ ಪ್ರಾಧ್ಯಾಪಕ ಶ್ರೀ ಹರೀಶ್ ಕಾಂಚನ್ ಕಾರ್ಯಕ್ರಮ ನಿರೂಪಿಸಿದರು.