ಕುಂದಾಪುರ(ಮೇ .03) : ಕುಂದಾಪುರ ಎಜ್ಯುಕೇಶನ್ ಸೊಸೈಟಿ (ರಿ.) ಪ್ರವರ್ತಿತ ವಿ. ಕೆ. ಆರ್. ಆಚಾರ್ಯ ಸ್ಮಾರಕ ಆಂಗ್ಲ ಮಾಧ್ಯಮ ಪ್ರೌಢ ಶಾಲೆ ಕುಂದಾಪುರ ಇಲ್ಲಿ ಈ ಬಾರಿಯ ಎಸ್. ಎಸ್. ಎಲ್. ಸಿ ಪರೀಕ್ಷೆಗೆ 106 ವಿದ್ಯಾರ್ಥಿಗಳು ಹಾಜರಾಗಿದ್ದು, 56 ವಿದ್ಯಾರ್ಥಿಗಳು ವಿಶಿಷ್ಟ ದರ್ಜೆಯಲ್ಲಿ ಮತ್ತು 41 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ತೇರ್ಗಡೆ ಹೊಂದಿರುತ್ತಾರೆ.
ಶಾಲೆಗೆ ಶೇಕಡಾ 99.05 ಫಲಿತಾಂಶ ಲಭಿಸಿರುತ್ತದೆ.