ಗಂಗೊಳ್ಳಿ(ಮೇ, 12) : ಗಂಗೊಳ್ಳಿಯ ಡಾ. ಬಿ ಆರ್ ಅಂಬೇಡ್ಕರ್ ಯುವಕ ಮಂಡಲ ಇದರ 38ನೇ ವಾರ್ಷಿಕೋತ್ಸವ ಮತ್ತು ಅಮೃತ ಯುವತಿ ಮಂಡಲ ಹಾಗೂ ಅರ್ಚನಾ ಮಹಿಳಾ ಮಂಡಲ ಇವುಗಳ 32ನೇ ವಾರ್ಷಿಕೋತ್ಸವದ ಅಂಗವಾಗಿ ಖ್ಯಾತ ಸಮಾಜ ಸೇವಕ ಈಶ್ವರ್ ಮಲ್ಪೆ ಅವರನ್ನು ಅವರ ಸ್ವಗೃಹದಲ್ಲಿ ಭೇಟಿ ಮಾಡಿ ಗೌರವಿಸಿ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಡಾಕ್ಟರ್ ಬಿ ಆರ್ ಅಂಬೇಡ್ಕರ್ ಯುವಕ ಮಂಡಲದ ಗೌರವಾಧ್ಯಕ್ಷರಾದ ಭಾಸ್ಕರ್ ಎಚ್ ಜಿ, ಅಧ್ಯಕ್ಷ ನಾಗೇಶ್, ಕಾರ್ಯದರ್ಶಿ ರಂಜಿತ್ ಹಾಗೂ ಸದಸ್ಯರಾದ ಕಿರಣ್ ಮತ್ತು ಮನೋಹರ್ ಉಪಸ್ಥಿತರಿದ್ದರು.