ಹೆಮ್ಮಾಡಿ (ಮೇ ,15): ಪದವಿಪೂರ್ವ ಶಿಕ್ಷಣ ಮಂಡಳಿಯವರು ಆಯೋಜಿಸಿದ 2ನೇ ಹಂತದ ದ್ವಿತೀಯ ಪಿ.ಯು.ಸಿ.ಪರೀಕ್ಷೆಯಲ್ಲಿ ಜನತಾ ಪದವಿಪೂರ್ವ ಕಾಲೇಜಿನ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಶ್ರದ್ಧಾ ಎಸ್ ಮೊಗವೀರ 595 /600 ಅಂಕಗಳನ್ನು ಪಡೆಯುವುದರ ಮೂಲಕ ರಾಜ್ಯ ಮಟ್ಟದಲ್ಲಿ 5ನೇ ರ್ಯಾಂಕ್ ಪಡೆದು ಶೈಕ್ಷಣಿಕ ಸಾಧನೆ ಮೆರೆದಿದ್ದಾರೆ.
ಸಾಧಕ ವಿದ್ಯಾರ್ಥಿನಿಗೆ ಕಾಲೇಜಿನ ಆಡಳಿತ ಮಂಡಳಿ,ಪ್ರಾಂಶುಪಾಲರು, ಬೋಧಕ,ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.