ಕುಂದಾಪುರ(ಮೇ ,22): ಕುಂದಾಪುರ ಎಜುಕೇಶನ್ ಸೊಸೈಟಿ (ರಿ.) ಪ್ರವರ್ತಿತ ಎಚ್. ಎಮ್. ಎಮ್. ಮತ್ತು ವಿ. ಕೆ. ಆರ್. ಆಚಾರ್ಯ ಸ್ಮಾರಕ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿನಿ ಸಾಯಿಸ್ಪರ್ಶ ಕೆ. 2024-2025 ರ ಸಾಲಿನ ಎಸ್. ಎಸ್. ಎಲ್. ಸಿ. ಪರೀಕ್ಷೆಯ ಮರು ಮೌಲ್ಯಮಾಪನದಲ್ಲಿ 625ಕ್ಕೆ 625 ಅಂಕಗಳನ್ನು ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿರುತ್ತಾಳೆ.
ಈಕೆ ಕುಂದಾಪುರದ ದೇವದಾಸ ಕೆ. ಮತ್ತು ಶಶಿಕಲಾ ಎಸ್. ದಂಪತಿಯ ಪುತ್ರಿ. ಸಂಸ್ಥೆಯ ಸಂಚಾಲಕರು ಮತ್ತು ಅಧ್ಯಕ್ಷರಾದ ಶ್ರೀ ಬಿ. ಎಮ್. ಸುಕುಮಾರ ಶೆಟ್ಟಿ ಹಾಗೂ ಶಾಲಾ ಪ್ರಾಂಶುಪಾಲರಾದ ಡಾ. ಚಿಂತನಾ ರಾಜೇಶ್, ಶಿಕ್ಷಕ ವೃಂದದವರು ವಿದ್ಯಾರ್ಥಿನಿಯನ್ನು ಅಭಿನಂದಿಸಿದ್ದಾರೆ.