ಕುಂದಾಪುರ(ಮೇ 26) : ಇಲ್ಲಿನ ಖಾರ್ವಿಕೇರಿ ನಿವಾಸಿ ಧಾರ್ಮಿಕ ಮುಖಂಡ, ಖಾರ್ವಿ ಸಮಾಜದ ನೇತಾರ ಹಾಗೂ ಕ್ರೀಡಾಪಟು ಜಯಾನಂದ ಖಾರ್ವಿಯವರು ಹೃದಯಾಘಾತದಿಂದ ಇಂದು ಮುಂಜಾನೆ 3.00 ಗಂಟೆಯ ವೇಳೆಗೆ ನಿಧನ ಹೊಂದಿದ್ದಾರೆ.
ಹಲವಾರು ವರ್ಷಗಳಿಂದ ಸಾಮಾಜಿಕ ಹಾಗೂ ಧಾರ್ಮಿಕ ಸೇವೆಯಲ್ಲಿ ತೊಡಗಿಸಿಕೊಂಡಿದ್ದ ಇವರು ಕೊಂಕಣ ಖಾರ್ವಿ ಸಮಾಜದ ಖಾರ್ವಿಕೇರಿಯ ಶ್ರೀ ಮಹಾಂಕಾಳಿ ದೇವಸ್ಥಾನದ ಮಾಜಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಇವರ ನಿಧನಕ್ಕೆ ಕೊಂಕಣ ಖಾರ್ವಿ ಸಮಾಜ ಬಾಂಧವರು ಹಾಗೂ ವಿವಿಧ ಧಾರ್ಮಿಕ ಮುಖಂಡರು ಸಂತಾಪ ವ್ಯಕ್ತಪಡಿಸಿದ್ದಾರೆ.