ಕುಂದಾಪುರ,(ಜೂ, 1): ಇಲ್ಲಿನ ಡಾl ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗದ ಆಶ್ರಯದಲ್ಲಿ ವಿಸ್ತರಣಾ ಚಟುವಟಿಕೆ ಭಾಗವಾಗಿ ವಿದ್ಯಾರ್ಥಿಗಳು ಬೀಜಾಡಿಯ ಕಪಿಲೆ ಗೋ ಸಮೃದ್ಧಿ ಟ್ರಸ್ಟಿಗೆ ಭೇಟಿ ನೀಡಿದರು.
ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ಕೆ. ಉಮೇಶ್ ಶೆಟ್ಟಿ, ಕಪಿಲೇ ಗೋಸಮೃದ್ಧಿ ಟ್ರಸ್ಟ್ ಪ್ರವರ್ತಕ ಕುಮಾರ್ ಕಾಂಚನ್ ಕಾರ್ಯಕ್ರಮ ಸಂಯೋಜಿಸಿದರು.
ಈ ಸಂದರ್ಭ ನಿರ್ವಹಣಾ ವಿಭಾಗದ ಪ್ರಾಧ್ಯಾಪಕ ಪ್ರವೀಣ್ ಮೊಗವೀರ ಗಂಗೊಳ್ಳಿ ವಿದ್ಯಾರ್ಥಿಗಳಿಗೆ ದೇಸಿ ಗೋ ಉತ್ಪನ್ನಗಳ ಮಹತ್ವದ ಕುರಿತು ಮಾಹಿತಿ ನೀಡಿದರು. ಕಾಲೇಜಿನ ಉಪ ಪ್ರಾಂಶುಪಾಲ ಮತ್ತು ಕನ್ನಡ ವಿಭಾಗದ ಮುಖ್ಯಸ್ಥ ಡಾ. ಚೇತನ್ ಶೆಟ್ಟಿ ಕೋವಾಡಿ, ವಾಣಿಜ್ಯ ವಿಭಾಗದ ಸಹಾಯಕ ಪ್ರಾಧ್ಯಾಪಕಿ ದೀಪಾ ಪೂಜಾರಿ , ಶ್ರೀಕಾಂತ್ ಬೀಜಾಡಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.