ಕುಂದಾಪುರ (ಜೂನ್-04): ವಿದ್ಯಾರ್ಥಿಗಳು ಸಮಯಪ್ರಜ್ಞೆ, ಪರಿಶ್ರಮ, ಶಿಸ್ತು, ಸಂಸ್ಕಾರಗಳನ್ನು ಮೈಗೂಡಿಸಿಕೊಂಡಾಗ ಪಡೆದ ಪದವಿಗೆ ಗೌರವ ಮತ್ತು ಮೌಲ್ಯ ಎಂದು ವಂಡಾರಿನ ಕೃಷ್ಣಪ್ರಸಾದ್ ಇಂಡಸ್ಟ್ರೀಸ್ ಮ್ಯಾನೇಜಿಂಗ್ ಡೈರೆಕ್ಟರ್ ಹಾಗೂ ಕಾಲೇಜಿನ ಆಡಳಿತ ಮಂಡಳಿ ಸದಸ್ಯ ಶ್ರೀ ಸಂಪತ್ ಶೆಟ್ಟಿ ಹೇಳಿದರು.
ಅವರು ಇಲ್ಲಿನ ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಆಯೋಜಿಸಿದ ಬೀಳ್ಕೊಡುಗೆ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಮಾತನಾಡಿದರು.
ಕಾಲೇಜಿನ ಪ್ರಾಂಶುಪಾಲರಾದ ಪೊ|್ರ ಕೆ. ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಉಪ-ಪ್ರಾಂಶುಪಾಲರಾದ ಡಾ| ಚೇತನ್ ಶೆಟ್ಟಿ ಕೋವಾಡಿ ಸ್ವಾಗತಿಸಿ, ಆಡಳಿತ ನಿಕಾಯಕರು ಹಾಗೂ ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿಗಳಾದ ಶ್ರೀ ರಕ್ಷಿತ್ ರಾವ್ ಗುಜ್ಜಾಡಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ವ್ಯವಹಾರ ನಿರ್ವಹಣಾ ವಿಭಾಗದ ಮುಖ್ಯಸ್ಥರಾದ ಶ್ರೀಮತಿ ನಂದಾ ರೈ, ಗಣಕ ವಿಜ್ಞಾನ ವಿಭಾಗದ ಮುಖ್ಯಸ್ಥರಾದ ಶ್ರೀ ಮಹೇಶ್ ಕುಮಾರ್ ಹಾಗೂ ವಾಣಿಜ್ಯ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಶ್ರೀ ಸತೀಶ್ ಶೆಟ್ಟಿ ಶುಭ ಹಾರೈಸಿದರು.
ವಿದ್ಯಾರ್ಥಿಗಳಾದ ಶ್ರದ್ಧಾ ಆರ್., ಶ್ರೀನಾಭ್ ಉಪಾಧ್ಯಾಯ, ರಾಜೇಶ್ವರಿ, ವೈಷ್ಣವಿ ಎಂ.ಎಸ್., ಶ್ರೇಯಾ, ನಾಗಶ್ರೀ ಭಟ್, ದೀಪ, ಶ್ರೀನಿಧಿ, ಪವಿತ್ರ ಪೈ ಅನಿಸಿಕೆ ಹಂಚಿಕೊAಡರು. ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ರೇಷ್ಮಾ ಶೆಟ್ಟಿ ವಂದಿಸಿ, ಇಂಗ್ಲೀಷ್ ಪ್ರಾಧ್ಯಾಪಕಿ ರವೀನಾ ಸಿ. ಪೂಜಾರಿ ಅತಿಥಿಗಳನ್ನು ಪರಿಚಯಿಸಿದರು. ಸಂಸ್ಕೃತ ಪ್ರಾಧ್ಯಾಪಕಿ ಮೇಘ ಭಟ್ ನಿರೂಪಿಸಿದರು.