ತೆಕ್ಕಟ್ಟೆ ( ಜೂ ,10): “ಗಿಡಗಳನ್ನು ನೆಟ್ಟು, ಪೋಷಿಸಿ ಬೆಳೆಸುವುದರ ಮೂಲಕ ನಾವೆಲ್ಲರೂ ನಮ್ಮ ಸುತ್ತಲಿನ ಪರಿಸವನ್ನು ಉಳಿಸಿ ಬೆಳೆಸುವ ಪ್ರಯತ್ನ ಮಾಡಬೇಕು. ಪ್ರಕೃತಿ ರಕ್ಷಣೆ ಎಂದರೆ ನಮ್ಮನ್ನು ನಾವೇ ರಕ್ಷಿಸಿಕೊಂಡಂತೆ.” ಎಂದು ಗೀತಾನಂದಫೌಂಡೇಶನ್ (ರಿ) ಮಣೂರು ಪಡುಕರೆ ಇದರ ಪ್ರವರ್ತಕರಾದ ಶ್ರೀ ಆನಂದ ಸಿ ಕುಂದರ್ ನುಡಿದರು. ಅವರು ತಮ್ಮ ಗೀತಾನಂದ ಫೌಂಡೇಶನ್ ವತಿಯಿಂದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಲಾಗಿದ್ದ ವನ ಮಹೋತ್ಸವ ಕಾರ್ಯಕ್ರಮದ ಭಾಗವಾಗಿ ಶಾಲಾ ಪರಿಸರದಲ್ಲಿ ಗಿಡಗಳನ್ನು ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ಸಮಾರಂಭದ ಅಧ್ಯಕ್ಷತೆಯನ್ನು ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷರಾದ ಶ್ರೀ ಕೃಷ್ಣ ಕೆದ್ಲಾಯ ವಹಿಸಿದ್ದರು. ಸಮಾರಂಭದಲ್ಲಿ ರಾಜ್ಯ ಪ್ರಶಸ್ತಿ ಪುರಸ್ಕೃತ ನಿವೃತ್ತ ಮುಖ್ಯ ಶಿಕ್ಷಕ ಶ್ರೀ ಚಂದ್ರಶೇಖರ ಶೆಟ್ಟಿ ಕೆ ಎನ್, ಕೊರ್ಗಿ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಪಲ್ಲವಿ ಕುಲಾಲ, ಗ್ರಾಮ ಪಂಚಾಯತ್ ಸದಸ್ಯರಾದ ರಾಘವೇಂದ್ರ ಶೆಟ್ಟಿ, ಎಸ್ ಡಿ ಎಂ ಸಿ ಉಪಾಧ್ಯಕ್ಷರಾದ ಆಶಾ ಕುಲಾಲ, ಎಸ್ ಡಿ ಎಂ ಸಿ ಗೆ ನೂತನವಾಗಿ ಅಧ್ಯಕ್ಷರಾಗಿ ಆಯ್ಕೆಯಾದ ಸುಧಾಕರ ಕುಲಾಲ, ಶಾಲಾ ಸಹ ಶಿಕ್ಷಕರಾದ ಸಂಜೀವ ಎಂ, ವಿಜಯಾ ಆರ್, ರವೀಂದ್ರ ನಾಯಕ್, ಸ್ವಾತಿ ಬಿ, ಗೌರವ ಶಿಕ್ಷಕಿ ಮಧುರಾ, ಎಸ್ ಡಿ ಎಂ ಸಿ ಸದಸ್ಯರು, ಪೋಷಕರು ಉಪಸ್ಥಿತರಿದ್ದರು.
ಶಾಲಾ ಮುಖ್ಯ ಶಿಕ್ಷಕ ಶೇಖರ ಕುಮಾರ್ ಸ್ವಾಗತಿಸಿದರು. ಸಹಶಿಕ್ಷಕ ಅಶೋಕ ತೆಕ್ಕಟ್ಟೆ ಕಾರ್ಯಕ್ರಮ ನಿರ್ವಹಿಸಿದರು. ಹಾಗೂ ವಿಜಯ ಶೆಟ್ಟಿ ವಂದಿಸಿದರು.