ಗಂಗೊಳ್ಳಿ(ಜು ,16) : ಬಿಲ್ಲವರ ಹಿತರಕ್ಷಣಾ ವೇದಿಕೆ ಗಂಗೊಳ್ಳಿ, ವೈಷ್ಣವಿ ಇವೆಂಟ್ಸ್ ಗಂಗೊಳ್ಳಿ ಮತ್ತು ಸಂಜೀವ ಪಾರ್ವತಿ ಪ್ರಕಾಶನ ಗಂಗೊಳ್ಳಿಯ ವತಿಯಿಂದ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಿಂದಿ ಶಿಕ್ಷಕರಾಗಿ ಮತ್ತು ಮುಖ್ಯೋಪಾಧ್ಯಾಯರಾಗಿ ಸುಮಾರು 36 ವರ್ಷಗಳ ಕಾಲ ಸೇವೆ ಸಲ್ಲಿಸಿ ಇತ್ತೀಚೆಗೆ ನಿವೃತ್ತಿ ಹೊಂದಿದ ಜಿ.ವಿಶ್ವನಾಥ ಭಟ್ ಅವರನ್ನು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯದ ಸಭಾಂಗಣದಲ್ಲಿ ಅಭಿನಂದಿಸಿ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ವೈಷ್ಣವಿ ಇವೆಂಟ್ಸ್ ಮಾಲೀಕರಾದ ಗೋಪಾಲ ಚಂದನ್, ಬಿಲ್ಲವರ ಹಿತರಕ್ಷಣಾ ವೇದಿಕೆಯ ಅಧ್ಯಕ್ಷ ಜಿ ಗೋಪಾಲ ಪೂಜಾರಿ, ಸಂಜೀವ ಪಾರ್ವತಿ ಪ್ರಕಾಶನದ ನಿರ್ವಾಹಕ ನರೇಂದ್ರ ಎಸ್ ಗಂಗೊಳ್ಳಿ, ಶ್ರೀ ಸೀತಾಳಿ ನವದುರ್ಗೆ ದೇವಸ್ಥಾನದ ಪಾತ್ರಿ ರಘುನಾಥ ಪೂಜಾರಿ, ಸರಸ್ವತಿ ವಿದ್ಯಾಲಯ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯ ದೀಕ್ಷಿತ್ ಮೇಸ್ತ ಮತ್ತು ಬಿಲ್ಲವರ ಹಿತರಕ್ಷಣಾ ವೇದಿಕೆಯ ಕಾರ್ಯದರ್ಶಿ ಜಿ ಎ ಆರ್ ಲಕ್ಷ್ಮಣ ಪೂಜಾರಿ ಉಪಸ್ಥಿತರಿದ್ದರು.