ಮೂಡ್ಲಕಟ್ಟೆ ( ಜೂ,21): ಇಲ್ಲಿನ ಮೂಡ್ಲಕಟ್ಟೆ ತಾಂತ್ರಿಕ ವಿದ್ಯಾಲಯದ ಎಂ.ಬಿ.ಎ ವಿಭಾಗದ ವತಿಯಿಂದ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ದಿನಾಂಕ 20 ಜೂನ್ 2025 ರಂದು ಆಚರಿಸಲಾಯಿತು.
ಈ ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಗಳಾಗಿ ಯೋಗ ಶಿಕ್ಷಕರಾದ ಶ್ರೀ ಮಂಜುನಾಥ ಎಸ್ ಬಿಜೂರು ಇವರು ಉಪಸ್ಥಿತರಿದ್ದು ಯೋಗದಿಂದಾಗುವ ಉಪಯೋಗಗಳ ಬಗ್ಗೆ ಪ್ರಥಮ ವರ್ಷದ ಎಂಬಿಎ ವಿದ್ಯಾರ್ಥಿಗಳಿಗೆ ತಿಳಿಸಿದರು.
ಯೋಗವು ಮನುಷ್ಯನ ಆಂತರಿಕ ಮತ್ತು ಮಾನಸಿಕ ಸ್ವಾಸ್ಥ್ಯ ಕಾಪಾಡಲು ಸಹಾಯ ಮಾಡುತ್ತದೆಂದು ತಿಳಿಸಿದರು. ಯೋಗದ ಪ್ರಾಮುಖ್ಯತೆ ಮತ್ತು ಯೋಗಾಸನ ಮಾಡಬೇಕಾದರೆ ಪಾಲಿಸಬೇಕಾದ ಕ್ರಮಗಳ ಬಗ್ಗೆ ತಿಳಿಸುವುದರ ಜೊತೆಗೆ ವಿದ್ಯಾರ್ಥಿಗಳಿಗೆ ಕೆಲವೊಂದು ಯೋಗಾಭ್ಯಾಸವನ್ನು ಮಾಡಿಸಿದರು. ಈ ಕಾರ್ಯಕ್ರಮದಲ್ಲಿ ಎಂ.ಬಿ.ಎ ವಿಭಾಗದ ಮುಖ್ಯಸ್ಥೆ ಡಾ. ಸುಚಿತ್ರ ಪೂಜಾರಿ ಮತ್ತು ಇತರ ಉಪನ್ಯಾಸಕರು ಉಪಸ್ಥಿತರಿದ್ದು ಎಂ.ಬಿ.ಎ ವಿಭಾಗದ ವಿದ್ಯಾರ್ಥಿನಿ ಕುಮಾರಿ ಸಿಂಚನ ಕಾರ್ಯಕ್ರಮವನ್ನು ನಿರೂಪಿಸಿ ವಂದಿಸಿದರು.