ನಾವುoದ(ಜು ,4): ಕೆಂಪೇಗೌಡ ದಿನಾಚರಣೆಯ ಅಂಗವಾಗಿ ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯವರು ಆಯೋಜಿಸಿದ ತಾಲೂಕು ಮಟ್ಟದ ಭಾಷಣ ಸ್ಪರ್ಧೆಯಲ್ಲಿ ನಾವುಂದದ ಸರಕಾರಿ ಪದವಿಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಸಿಂಚನ ಕೆ.ಪ್ರಥಮ ಸ್ಥಾನವನ್ನು, ವಿದ್ಯಾರ್ಥಿನಿ ತ್ರಿಶಾ ದ್ವಿತೀಯ ಸ್ಥಾನವನ್ನು ಗಳಿಸಿದ್ದಾರೆ.
ಪ್ರಬಂಧ ಸ್ಪರ್ಧೆಯಲ್ಲಿ ದ್ವಿತೀಯ ವಿಜ್ಞಾನ ವಿಭಾಗದ ಮನ್ವಿತ ತೃತೀಯ ಸ್ಥಾನ ಗಳಿಸಿರುತ್ತಾರೆ. ಪ್ರಾಂಶುಪಾಲರು ಭೋದಕ ಮತ್ತು ಬೋಧಕೇತರ ವೃಂದದವರು ವಿದ್ಯಾರ್ಥಿಗಳಿಗೆ ಅಭಿನಂದನೆಯನ್ನು ಸಲ್ಲಿಸಿದ್ದಾರೆ