ಕುಂದಾಪುರ(ಜು ,22): ಕುಂದಾಪುರ ರೆಡ್ಕ್ರಾಸ್ ಘಟಕದ ಅಂಗಸಂಸ್ಥೆಯಾದ ಸರಕಾರಿ ಪದವಿ ಪೂರ್ವ ಕಾಲೇಜಿನ ಜ್ಯೂನಿಯರ್ ರೆಡ್ಕ್ರಾಸ್ ಘಟಕವನ್ನು ಕುಂದಾಪುರ ರೆಡ್ಕ್ರಾಸ್ ಘಟಕದ ಅಧ್ಯಕ್ಷರಾದ ಶ್ರೀ ಜಯಕರ ಶೆಟ್ಟಿ ಉದ್ಘಾಟಿಸಿದರು. ಕಾಲೇಜಿನ ಪ್ರಾಂಶುಪಾಲರಾದ ಶ್ರೀ ರಾಮಕೃಷ್ಣ ಬಿ.ಜಿ ಅಧ್ಯಕ್ಷತೆ ವಹಿಸಿದ್ದರು.

ರೆಡ್ಕ್ರಾಸ್ ಸಂಚಾಲಕರಾದ ಶ್ರೀ ದಿನಕರ ಶೆಟ್ಟಿ ರೆಡ್ಕ್ರಾಸ್ ಸದಸ್ಯರಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು. ಜ್ಯೂನಿಯರ್ ರೆಡ್ಕ್ರಾಸ್ 2025-26 ನೇ ಸಾಲಿನ ಅಧ್ಯಕ್ಷರಾದ ದ್ವಿತೀಯ ಪಿಯುಸಿ ಅಮೂಲ್ಯ, ಕಾರ್ಯದರ್ಶಿ ಪ್ರಥಮ ಪಿಯುಸಿ ಗಗನ್ ಹೆಬ್ಬಾರ್ ಅವರಿಗೆ ಜಯಕರ ಶೆಟ್ಟಿಯವರು ಅಧಿಕಾರ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ 2024-25 ನೇ ಸಾಲಿನಲ್ಲಿ ರೆಡ್ಕ್ರಾಸ್ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಪ್ರಗತಿ ಪತ್ರ ನೀಡಲಾಯಿತು. ಜ್ಯೂನಿಯರ್ ರೆಡ್ಕ್ರಾಸ್ ಸಂಚಾಲಕರಾದ ಶ್ರೀ ರಾಜೇಶ್ ಹೆಬ್ಬಾರ್ ಸ್ವಾಗತಿಸಿದರು. ಮಾಜಿ ಸಂಚಾಲಕ ಶ್ರೀ ಶಂಕರ ನಾಯ್ಕ ವಂದಿಸಿದರು. ಉಪನ್ಯಾಸಕರ ಕಾಳಾವರ ಶ್ರೀ ಉದಯ ಕುಮಾರ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.










