ಕುಂದಾಪುರ (ಜು.25): 2025-26ನೇ ಸಾಲಿನಲ್ಲಿ ಕಾಲೇಜಿಗೆ ಸೇರ್ಪಡೆಗೊಂಡ ಬಿ.ಬಿ.ಎ. ವಿದ್ಯಾರ್ಥಿಗಳಿಗೆ ಪೂರ್ವ ಪರಿಚಯ ಕಾರ್ಯಕ್ರಮವನ್ನು ಕಾಲೇಜಿನಲ್ಲಿ ಜುಲೈ 25 ರಂದು ಹಮ್ಮಿಕೊಳ್ಳಲಾಯಿತು.

ವ್ಯವಹಾರ ಆಡಳಿತ ವಿಭಾಗದ ಮುಖ್ಯಸ್ಥರಾದ ಶ್ರೀಮತಿ ನಂದಾ ರೈ ಬಿ.ಬಿ.ಎ ಕೋರ್ಸ್ಗಳ ವಿಶೇಷತೆಗಳು ಹಾಗೂ ಭವಿಷ್ಯದಲ್ಲಿ ವಿದ್ಯಾರ್ಥಿಗಳಿಗೆ ಇದರಿಂದ ಲಭ್ಯವಾಗುವ ಪ್ರಯೋಜನಗಳ ಕುರಿತು ತಿಳಿಸಿದರು.

ವಿಭಾಗದ ಪ್ರಾಧ್ಯಾಪಕರುಗಳಾದ ಶ್ರೀಮತಿ ಅವಿತಾ ಕೊರೆಯಾ, ಶ್ರೀ ಹರೀಶ್ ಬಿ, ಶ್ರೀ ರಜತ್ ಬಂಗೇರ ಹಾಗೂ ವಿಶಾಲಾಕ್ಷಿ ಉಪಸ್ಥಿತರಿದ್ದರು.ಸಹಾಯಕ ಪ್ರಾಧ್ಯಾಪಕರಾದ ಶ್ರೀ ಪ್ರವೀಣ್ ಮೊಗವೀರ ಗಂಗೊಳ್ಳಿ ಕಾರ್ಯಕ್ರಮ ನಿರೂಪಿಸಿದರು.











