ಕುಂದಾಪುರ (ಆ. 06): ಬದುಕಿನಲ್ಲಿ ಕಠಿಣ ಸವಾಲುಗಳು ಎದುರಾದಾಗ ಅದನ್ನು ಎದುರಿಸಲು ಆತ್ಮಸ್ಥೈರ್ಯವನ್ನು ಬೆಳೆಸಿಕೊಳ್ಳಬೇಕು, ಜೊತೆಗೆ ಪರೋಪಕಾರ ಹಾಗೂ ಸೇವಾ ಮನೋಭಾವವನ್ನು ವಿದ್ಯಾರ್ಥಿಗಳು ಮೈಗೂಡಿಸಿಕೊಳ್ಳಬೇಕು ಎಂದು ಸಮಾಜ ಸೇವಕ ಹಾಗೂ ಈಜು ತಜ್ಞರಾದ ಈಶ್ವರ್ ಮಲ್ಪೆ ಹೇಳಿದರು.

ಅವರು ಕುಂದಾಪುರದ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವ್ಯವಹಾರ ಆಡಳಿತ ವಿಭಾಗ ಹಮ್ಮಿಕೊಂಡ ಸಾಮಾಜಿಕ ಜವಾಬ್ದಾರಿ ಎನ್ನುವ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು.

ಕಾಲೇಜಿನ ಉಪ-ಪ್ರಾಂಶುಪಾಲರಾದ ಡಾ| ಚೇತನ್ ಶೆಟ್ಟಿ ಕೊವಾಡಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ವ್ಯವಹಾರ ಆಡಳಿತ ವಿಭಾಗದ ಮುಖ್ಯಸ್ಥರಾದ ಶ್ರೀಮತಿ ನಂದಾ ರೈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಸಹಪ್ರಾಧ್ಯಾಪಕರಾದ ಶ್ರೀ ಪ್ರವೀಣ್ ಮೊಗವೀರ ಗಂಗೊಳ್ಳಿ ವಂದಿಸಿದರು. ಬಿ.ಬಿ.ಎ. ವಿದ್ಯಾರ್ಥಿಗಳಾದ ಸುಹಾಸ್ ಮಲ್ಯ ಪ್ರಾರ್ಥಿಸಿದರು, ಐಶ್ವರ್ಯ ಸ್ವಾಗತಿಸಿದರು. ರಶ್ಮಿತಾ ಸಂಪನ್ಮೂಲ ವ್ಯಕ್ತಿಯ ಪರಿಚಯಿಸಿದರು, ಶ್ರೀರಕ್ಷಾ ನಿರೂಪಿಸಿದರು.









