ಕುಂದಾಪುರ (ಆ. 9): ಕುಂದಾಪುರ ಎಜುಕೇಶನ್ ಸೊಸೈಟಿ(ರಿ.) ಪ್ರವರ್ತಿತ ಎಚ್.ಎಮ್.ಎಮ್ ಮತ್ತು ವಿ.ಕೆ.ರ್ ಶಾಲೆಗಳ 10ನೇ ತರಗತಿಯ ಮಹಮ್ಮದ್ ಸಫಾನ್ ಶಿವಮೊಗ್ಗದಲ್ಲಿ ಆಯೋಜಿಸಿದ ಅಂತರಾಷ್ಟ್ರೀಯ ಮಟ್ಟದ ಮುಕ್ತ ಕರಾಟೆ ಚಾಂಪಿಯನ್ ಶಿಪ್ -2025ರ ಕುಮಿಟೆ ವಿಭಾಗದಲ್ಲಿ ಪ್ರಥಮ ಹಾಗೂ ಕಟಾ ವಿಭಾಗದಲ್ಲಿ ದ್ವಿತೀಯ ಸ್ಥಾನವನ್ನು ಪಡೆದಿದ್ದಾನೆ.

ವಿಜೇತ ವಿದ್ಯಾರ್ಥಿಯನ್ನು ಸಂಸ್ಥೆಯ ಪ್ರಾಂಶುಪಾಲರಾದ ಡಾ. ಚಿಂತನಾ ರಾಜೇಶ್ ಮತ್ತು ವಿವಿಧ ವಿಭಾಗಗಳ ಮುಖ್ಯಸ್ಥರು ಅಭಿನಂದಿಸಿದ್ದಾರೆ.











