ಕುಂದಾಪುರ (ಆ,13): ಕೆಥೋಲಿಕ್ ಸಭಾ ಉಡುಪಿ (ರಿ) ಕುಂದಾಪುರ ಘಟಕದ ಸಂಘಟನೆಯ ಆಶ್ರಯದಲ್ಲಿ ಸ್ವಾತಂತ್ರ್ಯೋತ್ಸವದ ಅಂಗವಾಗಿ ಸೈಂಟ್ ಮೇರಿಸ್ ಪದವಿ ಪೂರ್ವ ಕಾಲೇಜು ಕುಂದಾಪುರದಲ್ಲಿ ನಡೆದ ಅಂತರ್ ಕಾಲೇಜು ಸಮೂಹ ನೃತ್ಯದಲ್ಲಿ ಸರಕಾರಿ ಪದವಿ ಪೂರ್ವ ಕಾಲೇಜು ಕುಂದಾಪುರ ಪ್ರಥಮ ಸ್ಥಾನ, ಸಮೂಹ ಗೀತೆಯಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾರೆ.

ವಿಜೇತ ತಂಡದೊಂದಿಗೆ ವ್ಯವಸ್ಥಾಪಕ ಉಪನ್ಯಾಸಕರಾದ ಶ್ರೀಮತಿ ಗೀತಾ ಕುಂದರ್ ಮತ್ತು ಶ್ರೀಮತಿ ಜ್ಯೋತ್ಸ್ನಾ ಪೈ ಉಪಸ್ಥಿತರಿದ್ದರು. ಕಾಲೇಜು ಪ್ರಾಂಶುಪಾಲರು, ಉಪನ್ಯಾಸಕರು, ಸಿಬ್ಬಂದಿ ವರ್ಗದವರು ಹಾಗೂ ಕಾಲೇಜು ಅಭಿವೃದ್ಧಿ ಸಮಿತಿಯವರು ಅಭಿನಂದಿಸಿರುತ್ತಾರೆ.











