ಗಂಗೊಳ್ಳಿ( ಆ,19): ಇಲ್ಲಿನ ಸರಸ್ವತಿ ವಿದ್ಯಾಲಯ ಪದವಿ ಪರ್ವ ಕಾಲೇಜಿನ ವಿದ್ಯಾರ್ಥಿಗಳಿಗೆ ನಶಾ ಮುಕ್ತ ಭಾರತ ಅಭಿಯಾನದ ಪ್ರತಿಜ್ಞಾವಿಧಿ ಕಾರ್ಯಕ್ರಮ ಕಾಲೇಜಿನ ರೋಟರಿ ಸಭಾಂಗಣದಲ್ಲಿ ಇತ್ತೀಚೆಗೆ ನಡೆಯಿತು.

ಗಂಗೊಳ್ಳಿ ಆರಕ್ಷಕ ಠಾಣೆಯ ಎ.ಎಸ್.ಐ ಆನಂದ ಬಿ ಅವರು ಪ್ರತಿಜ್ಞಾವಿಧಿಯನ್ನು ಬೋಧಿಸಿದರು. ಗಂಗೊಳ್ಳಿ ಠಾಣೆಯ ಹೆಡ್ ಕಾನ್ಸ್ಟೇಬಲ್ ರಾಜು ನಾಯ್ಕ್, ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಕವಿತಾ ಎಂ ಸಿ ವಿದ್ಯಾರ್ಥಿ ಪ್ರತಿನಿಧಿಗಳು ಮತ್ತು ಬೋಧಕರು ಉಪಸ್ಥಿತರಿದ್ದರು. ವಾಣಿಜ್ಯಶಾಸ್ತ್ರ ಉಪನ್ಯಾಸಕ ನರೇಂದ್ರ ಎಸ್ ಗಂಗೊಳ್ಳಿ ನಿರೂಪಿಸಿ ವಂದಿಸಿದರು.











