ಕುಂದಾಪುರ(ಆ,16): ನಾವಿಂದು ಆಚರಿಸುವ 79ನೇ ಸ್ವಾತಂತ್ರ್ಯೋತ್ಸವ ಆಚರಣೆಯ ಹಿಂದೆ ಬಹಳಷ್ಟು ಹೋರಾಟಗಾರರ ತ್ಯಾಗ ಬಲಿದಾನವಿದೆ. ನಾವು ಅವರನ್ನೆಲ್ಲ ಸ್ಮರಿಸಬೇಕು. ಹಾಗೆಯೇ ಇಂದಿನ ವಿದ್ಯಾರ್ಥಿಗಳು ಉತ್ತಮವಾದ ಶಿಕ್ಷಣವನ್ನು ಪಡೆದು ಮುಂದೆ ದೇಶದ ಅಭಿವೃದ್ಧಿಗೆ ಬಹಳಷ್ಟು ಕೊಡುಗೆ ನೀಡಬೇಕು ಎಂದು ಚಿತ್ತೂರಿನ ಪ್ರಕಾಶ್ ಚಂದ್ರ ಶೆಟ್ಟಿ ಮಾತನಾಡಿದರು.

ಅವರು ಕುಂದಾಪುರ ಎಜುಕೇಶನ್ ಸೊಸೈಟಿ (ರಿ.) ಪ್ರವರ್ತಿತ ಎಚ್. ಎಂ. ಎಂ. ಮತ್ತು ವಿ.ಕೆ.ಆರ್. ಶಾಲೆಗಳು ಆಚರಿಸಿದ 79ನೇ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಧ್ವಜಾರೋಹಣಗೈದು ಮಾತನಾಡಿದರು. ಸಂಸ್ಥೆಯ ಅಧ್ಯಕ್ಷರು ಹಾಗೂ ಸಂಚಾಲಕರಾದ ಶ್ರೀ ಬಿ. ಎಮ್. ಸುಕುಮಾರ ಶೆಟ್ಟಿಯವರು 79ನೇ ಸ್ವಾತಂತ್ರ್ಯೋತ್ಸವದ ಶುಭಾಶಯ ತಿಳಿಸಿದರು. ಉಪ ಪ್ರಾಂಶುಪಾಲೆ ಹಾಗೂ ವಿ. ಕೆ. ಆರ್. ಹೈಸ್ಕೂಲಿನ ಮುಖ್ಯ ಶಿಕ್ಷಕಿಯಾದ ಶುಭಾ ಕೆ. ಎನ್. ಅವರು ಪ್ರಾಸ್ತಾವಿಕ ಮಾತುಗಳನ್ನಾಡಿದರು.

ಶಾಲೆಯ ಎಲ್ಲಾ ವಿಭಾಗಗಳ ಮುಖ್ಯಸ್ಥರು ಉಪಸ್ಥಿತರಿದ್ದರು. 10ನೇ ತರಗತಿ ವಿದ್ಯಾರ್ಥಿ ಕಿರಣ್ ಡಿ. ಎಸ್. 79ನೇ ಸ್ವಾತಂತ್ರ್ಯ ದಿನಾಚರಣೆ ಬಗ್ಗೆ ಮಾತನಾಡಿದರು. ಭಾರ್ಗವ ಆರ್. ಅತಿಥಿಯನ್ನು ಪರಿಚಯಿಸಿದರು. ವಿದ್ಯಾರ್ಥಿನಿ ಅವಿಷ ಕಾರ್ಯಕ್ರಮ ನಿರೂಪಿಸಿ ವಂದಿಸಿದರು. ಪ್ರಾರ್ಥಮಿಕ ಮತ್ತು ಪ್ರೌಢಶಾಲೆ ವಿಭಾಗದ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನೆರವೇರಿತು.










