ಕುಂದಾಪುರ: (ಆ 21 ): ಕುಂದಾಪುರ ಎಜುಕೇಶನ್ ಸೊಸೈಟಿ( ರಿ ) ಪ್ರವರ್ತಿತ ಎಚ್.ಎಮ್.ಎಮ್ ಮತ್ತು ವಿ.ಕೆ.ಆರ್ ಆಂಗ್ಲ ಮಾಧ್ಯಮ ಶಾಲೆಗಳ ಪ್ರಾಥಮಿಕ ವಿಭಾಗದ 7ನೇ ತರಗತಿಯ ವಿದ್ಯಾರ್ಥಿನಿ ಸಂಹಿತಾ ತಂತ್ರಿ ಲಯನ್ಸ್ ಕ್ಲಬ್ ಹಂಗಳೂರು ಇವರ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಆಯೋಜಿಸಲ್ಪಟ್ಟ ದೇಶಭಕ್ತಿ ಗೀತೆ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನವನ್ನು ಪಡೆದಿರುತ್ತಾಳೆ.

ವಿಜೇತ ವಿದ್ಯಾರ್ಥಿನಿಯನ್ನು ಸಂಸ್ಥೆಯ ಆಡಳಿತ ಮಂಡಳಿ, ಪ್ರಾಂಶುಪಾಲರಾದ ಡಾ. ಚಿಂತನಾ ರಾಜೇಶ್ ಮತ್ತು ವಿವಿಧ ವಿಭಾಗಗಳ ಮುಖ್ಯಸ್ಥರು ಅಭಿನಂದಿಸಿದರು.










