ಕುಂದಾಪುರ(ಆ. 23): ವಿದ್ಯಾರ್ಥಿ ಬದುಕಿನಲ್ಲಿ ಪಠ್ಯದ ಜೊತೆಗೆ ಪಠ್ಯಪೂರಕ ಚಟುವಟಿಕೆಗಳು ಅತಿ ಪ್ರಮುಖವಾದ್ದು. ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಯಲ್ಲಿ ಏನ್ ಎಸ್ ಎಸ್ ನಂತಹ ವೇದಿಕೆಗಳು ಮಹತ್ವದ ಪಾತ್ರವನ್ನು ವಹಿಸುತ್ತದೆ. ವಿದ್ಯಾರ್ಥಿ ಸಮುದಾಯದಲ್ಲಿ ವ್ಯಕ್ತಿತ್ವದ ವಿಕಸನದ ಜೊತೆಗೆ ಮಾನವೀಯ ಮತ್ತು ಸಂವಿಧಾನಿಕ ಮೌಲ್ಯವನ್ನು ಬೆಳೆಸಲು ರಾಷ್ಟ್ರೀಯ ಸೇವಾ ಯೋಜನೆಯಂತಹ ಪಠ್ಯ ಪೂರಕ ವೇದಿಕೆಗಳು ಅತ್ಯವಶ್ಯಕ ಎಂದು ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಏನ್ ಏಸ್ ಏಸ್ ಕಾರ್ಯಕ್ರಮ ಸಂಯೋಜನಾಧಿಕಾರಿಗಳಾದ ಡಾ. ಗಣನಾಥ ಎಕ್ಕಾರು ಹೇಳಿದರು.


ಅವರು ಕುಂದಾಪುರದ ಡಾlಬಿ.ಬಿ ಹೆಗ್ಡೆ ಕಾಲೇಜಿನ ಎನ್ ಎಸ್ಎಸ್ ಘಟಕದ ಪ್ರಾಕ್ತನ ವಿದ್ಯಾರ್ಥಿಗಳು ಆಯೋಜಿಸಿದ ನಲ್ಮೆಯ ನಮನ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿ ವಿದ್ಯಾರ್ಥಿಗಳ ಕುರಿತು ಮಾತನಾಡಿದರು.

ಕಾಲೇಜಿನ ಪ್ರಾಂಶುಪಾಲರಾದ ಪ್ರೋ. ಡಾ.ಕೆ. ಉಮೇಶ್ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದರು.ಇದೆ ಸಂದರ್ಭದಲ್ಲಿ ಡಾಕ್ಟರೇಟ್ ಪದವಿ ಪಡೆದ ಪ್ರಾಂಶುಪಾಲರಿಗೆ ಅಭಿನಂಧನೆ ಸಲ್ಲಿಸಲಾಯಿತು.

ನಿಕಟಪೂರ್ವ ಎನ್ಎಸ್ಎಸ್ ಯೋಜನಾಧಿಕಾರಿ ಡಾ ಚೇತನ್ ಶೆಟ್ಟಿ ಕೋವಾಡಿ ಹಾಗೂ ದೀಪಾ ಪೂಜಾರಿಯವರನ್ನು ಎನ್ಎಸ್ಎಸ್ ಪ್ರಾಕ್ತನ ವಿದ್ಯಾರ್ಥಿಗಳ ವತಿಯಿಂದ ಸನ್ಮಾನಿಸಲಾಯಿತು. ಎನ್ಎಸ್ಎಸ್ ಯೋಜನಾಧಿಕಾರಿಗಳಾದ ರಾಜೇಶ್ ಶೆಟ್ಟಿ ಹಾಗೂ ಪೂಜಾ ಕುಂದರ್ ಉಪಸ್ಥಿತರಿದ್ದರು. ಕಾಲೇಜಿನ ಎನ್ಎಸ್ಎಸ್ ಘಟಕದ ಪೂರ್ವ ಯೋಜನಾಧಿಕಾರಿಗಳನ್ನು ಈ ಸಂದರ್ಭದಲ್ಲಿ ಗೌರವಿಸಲಾಯಿತು.
ಕಾಲೇಜಿನ ಬೋಧಕ- ಬೋಧಕಕೇತರ ವೃಂದ,ಎನ್ ಎಸ್ಎಸ್ ಪ್ರಾಕ್ತನ ಮತ್ತು ಪ್ರಸ್ತುತ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಎನ್ ಎಸ್ಎಸ್ ಪ್ರಾಕ್ತನ ವಿದ್ಯಾರ್ಥಿಗಳಾದ ಶ್ರೀನಭ್ ಸ್ವಾಗತಿಸಿದರು. ವಿಘ್ನೇಶ್ವರ್ ಅತಿಥಿಗಳನ್ನು ಪರಿಚಯಿಸಿದರು. ಪವಿತ್ರ ಪೈ ಎನ್ಎಸ್ಎಸ್ ಅನುಭವವನ್ನು ಹಂಚಿಕೊಂಡರು. ವಿಘ್ನೇಶ್ ಶೇಟ್ ವಂದಿಸಿದರು. ಶ್ರದ್ದಾ ಆರ್. ನಿರೂಪಿಸಿದರು.










