.
ಹೆಮ್ಮಾಡಿ (ಆ ,24): ಮೊಗವೀರ ಯುವ ಸಂಘಟನೆ(ರಿ.),ಉಡುಪಿ ಜಿಲ್ಲೆ ಹೆಮ್ಮಾಡಿ ಘಟಕದ ನೇತೃತ್ವದಲ್ಲಿ ಜಿ.ಶಂಕರ್ ಫ್ಯಾಮಿಲಿ ಟ್ರಸ್ಟ್ (ರಿ),ಅಂಬಲಪಾಡಿ ಉಡುಪಿ ಸಹಯೋಗದೊಂದಿಗೆ ಬಗ್ವಾಡಿ ಶ್ರೀ ಮಹಿಷಾಸುರ ಮರ್ದಿನಿ ದೇವಸ್ಥಾನದ ವಠಾರದಲ್ಲಿ ಆಗಸ್ಟ್ 23 ರಂದು ವನಮಹೋತ್ಸವ ಹಾಗೂ ಗಿಡ ವಿತರಣಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.


ಹೆಮ್ಮಾಡಿ ಘಟಕದ ಅಧ್ಯಕ್ಷರಾದ ದಿನೇಶ್ ಕಾಂಚನ್ ಬಾಳಿಕೆರೆ, ಮೊಗವೀರ ಮಹಾಜನ ಸೇವಾ ಸಂಘ (ರಿ.), ಬಗ್ವಾಡಿ ಹೋಬಳಿ ಕುಂದಾಪುರ ಶಾಖೆ ಇದರ ಅಧ್ಯಕ್ಷರಾದ ಶ್ರೀ ಉದಯ್ ಕುಮಾರ್ ಹಟ್ಟಿ ಅಂಗಡಿ, ಮಾಜಿ ಅಧ್ಯಕ್ಷರಾದ ಎಂಎಂ ಸುವರ್ಣ, ಘಟಕದ ಗೌರವಾಧ್ಯಕ್ಷ ಲೋಹಿತಾಶ್ವ ಆರ್ ಕುಂದರ್, ಮಾಜಿ ಅಧ್ಯಕ್ಷ ರಾಘವೇಂದ್ರ ನೆಂಪು , ಕಾರ್ಯದರ್ಶಿಗಳಾದ ಜಗದೀಶ ನೆಂಪು, ಸ್ತ್ರೀಶಕ್ತಿ ಬಗ್ವಾಡಿ ಇದರ ಅಧ್ಯಕ್ಷರಾದ ಶ್ರೀಮತಿ ಶ್ಯಾಮಲಾ ಚಂದನ್ ಹಾಗೂ ಸದಸ್ಯರು, ಮೊಗವೀರ ಮಹಾಜನ ಸೇವಾ ಸಂಘ ರಿ.),ಬಗ್ವಾಡಿ ಹೋಬಳಿ ಕುಂದಾಪುರ ಶಾಖೆಯ ಸದಸ್ಯರು, ಯುವ ಸಂಘಟನೆಯ ಹೆಮ್ಮಾಡಿ ಘಟಕದ ಸದಸ್ಯರು ಹಾಗೂ ದೇವಸ್ಥಾನದ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಎಲ್ಲಾ ಸದಸ್ಯರಿಗೆ, ಆಹ್ವಾನಿತರಿಗೆ ಗಿಡವನ್ನು ವಿತರಿಸಲಾಯಿತು.











