ಕುಂದಾಪುರ (ಆ.25): ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವ್ಯವಹಾರ ಆಡಳಿತ ವಿಭಾಗ ಹಾಗೂ ರೋವರ್ಸ್ & ರೇಂಜರ್ಸ್ ಘಟಕದ ಜಂಟಿ ಆಶ್ರಯದಲ್ಲಿ ಪರಿಸರ ಸ್ನೇಹಿ ಮಣ್ಣಿನ ಗಣಪತಿ ರಚನೆಯ ಸ್ಪರ್ಧೆಯನ್ನು ಕಾಲೇಜಿನ ವಿದ್ಯಾರ್ಥಿಗಳಿಗೆ ಆಗಸ್ಟ್ 25ರಂದು ಕಾಲೇಜಿನ ಪ್ರಾಂಗಣದಲ್ಲಿ ಹಮ್ಮಿಕೊಳ್ಳಲಾಯಿತು.

ಅತೀಯಾದ ರಾಸಾಯನಿಕ ಬಳಕೆ ಹಾಗೂ ಕೃತಕ ವಸ್ತುಗಳನ್ನು ಬಳಸಿ ಗಣಪತಿ ಮೂರ್ತಿಯನ್ನು ರಚಿಸುವುದು ಪರಿಸರಕ್ಕೆ ಹಾನಿಕಾರಕ ಆ ನಿಟ್ಟಿನಲ್ಲಿ ಪರಿಸರಕ್ಕೆ ಪೂರಕವಾದ ಮಣ್ಣಿನ ಗಣಪತಿಯನ್ನು ರಚಿಸುವುದು ಉತ್ತಮ ಎಂದು ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಡಾ| ಕೆ. ಉಮೇಶ್ ಶೆಟ್ಟಿ ಹೇಳಿದರು. ಈ ಸ್ಪರ್ಧೆಯಲ್ಲಿ ಸುಜನ್ ತೃತೀಯ ಬಿ.ಕಾಂ. (ಇ) ಪ್ರಥಮ ಸ್ಥಾನ, ಆಕಾಶ್ ಪೂಜಾರಿ, ತೃತೀಯ ಬಿ.ಕಾಂ. (ಇ) ದ್ವಿತೀಯ ಸ್ಥಾನ, ಸಾಥ್ವಿಕ್ ಕೆ. ಪ್ರಥಮ್ ಬಿ.ಕಾಂ. (ಸಿ) ತೃತೀಯ ಸ್ಥಾನ ಪಡೆದಿದ್ದಾರೆ.

ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಡಾ| ಕೆ. ಉಮೇಶ್ ಶೆಟ್ಟಿ, ಉಪ-ಪ್ರಾಂಶುಪಾಲರಾದ ಡಾ| ಚೇತನ್ ಶೆಟ್ಟಿ ಕೋವಾಡಿ, ವ್ಯವಹಾರ ಆಡಳಿತ ವಿಭಾಗದ ಮುಖ್ಯಸ್ಥರಾದ ಶ್ರೀಮತಿ ನಂದಾ ರೈ, ರೋವರ್ಸ್ ಸ್ಕೌಟ್ ಲೀಡರ್ ಶ್ರೀ ಪ್ರವೀಣ್ ಮೊಗವೀರ ಗಂಗೊಳ್ಳಿ ಹಾಗೂ ರೇಂಜರ್ಸ್ ಲೀಡರ್ ಶ್ರೀಮತಿ ಜೋಸ್ಲಿನ್ ಡಿ. ಅಲ್ಮೇಡಾ, ವ್ಯವಹಾರ ಆಡಳಿತ ವಿಭಾಗದ ಪ್ರಾಧ್ಯಾಪಕರು, ಕಾಲೇಜಿನ ಬೋಧಕ-ಬೋಧಕೇತರ ವೃಂದ ಹಾಗೂ ರೋವರ್ಸ್ ಮತ್ತು ರೇಂಜರ್ಸ್ ಸ್ವಯಂಸೇವಕರು ಉಪಸ್ಥಿತರಿದ್ದರು.










