ಉಡುಪಿ( ಸೆ .02): ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಉಡುಪಿ ಭಂಡಾರ್ಕರ್ಸ್ ಪದವಿ ಪೂರ್ವ ಕಾಲೇಜು ಕುಂದಾಪುರ ರೋಟರಿ ಕ್ಲಬ್ ಕುಂದಾಪುರ ಸನ್ ರೈಸ್ ಆಶ್ರಯದಲ್ಲಿ ನಡೆದ ಜಿಲ್ಲಾಮಟ್ಟದ ಶಟಲ್ ಬ್ಯಾಡ್ಮಿಂಟನ್ 2025ರ ಪಂದ್ಯಾಟದಲ್ಲಿ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಪ್ರಜ್ವಲ್ ಪೈ ಎಂ ಇವರು ಜಿಲ್ಲಾಮಟ್ಟದಲ್ಲೂ ಅತ್ಯುತ್ತಮ ಪ್ರದರ್ಶನದೊಂದಿಗೆ ರಾಜ್ಯಮಟ್ಟದಲ್ಲಿ ನಡೆಯುವ ಪಂದ್ಯ ಕೂಟಕ್ಕೆ ಆಯ್ಕೆಯಾಗಿದ್ದಾರೆ.

ಈ ಸಾಧನೆಗೈದ ವಿದ್ಯಾರ್ಥಿಗೆ ಸಂಸ್ಥೆಯ ಆಡಳಿತ ಮಂಡಳಿಯವರು, ಪ್ರಾಂಶುಪಾಲರು ಶಿಕ್ಷಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.











