ಹೆಮ್ಮಾಡಿ (ಸೆ.01): ಮೊಗವೀರ ಯುವ ಸಂಘಟನೆ (ರಿ.) ಉಡುಪಿ ಜಿಲ್ಲೆ ಹೆಮ್ಮಾಡಿ ಘಟಕ,ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ (ರಿ.) ಅಂಬಲಪಾಡಿ, ಉಡುಪಿ ಇವರ ನೇತೃತ್ವದಲ್ಲಿ ರಕ್ತನಿಧಿ ವಿಭಾಗ ಮಣಿಪಾಲ ಹಾಗೂ ಜಿಲ್ಲಾಡಳಿತ ಉಡುಪಿ ಇವರ ಸಹಯೋಗದೊಂದಿಗೆ ಹೆಮ್ಮಾಡಿ ಮೀನುಗಾರರ ಪ್ರಾಥಮಿಕ ಸಹಕಾರಿ ಸಂಘ(ನಿ.) ಹೆಮ್ಮಾಡಿ, ಇವರ ಸಹಕಾರದೊಂದಿಗೆ ಹಮ್ಮಿಕೊಂಡ ಸ್ವಯಂ ಪ್ರೇರಿತ ರಕ್ತದಾನ ಶಿಬಿರವು ಅಕ್ಟೋಬರ್ 31 ರಂದು ಹೆಮ್ಮಾಡಿಯ ಮೀನುಗಾರರ ಪ್ರಾಥಮಿಕ ಸಹಕಾರಿ ಸಂಘ(ನಿ)ದ ಮತ್ಸ್ಯ ಜ್ಯೋತಿ ಸಭಾಂಗಣದಲ್ಲಿ ಸಂಪನ್ನಗೊಂಡಿತು.ಒಟ್ಟು 72 ಯೂನಿಟ್ ರಕ್ತವನ್ನು ಶಿಬಿರದಲ್ಲಿ ಸಂಗ್ರಹಿಸಲಾಯಿತು.

ಮೊಗವೀರ ಯುವ ಸಂಘಟನೆ (ರಿ.) ಉಡುಪಿ ಜಿಲ್ಲೆ ಇದರ ಜಿಲ್ಲಾಧ್ಯಕ್ಷರಾದ ಶ್ರೀ ಜಯಂತ್ ಅಮೀನ್ ಕೋಡಿ ಶಿಬಿರವನ್ನು ಉದ್ಘಾಟಿಸಿದರು. ಮುಖ್ಯ ಅತಿಥಿ ನೆಲೆಯಲ್ಲಿ ಮೊಗವೀರ ಮಹಾಜನ ಸೇವಾ ಸಂಘ (ರಿ), ಬಗ್ವಾಡಿ ಹೋಬಳಿ ಕುಂದಾಪುರ ಶಾಖೆ ಇದರ ಅಧ್ಯಕ್ಷರಾದ ಉದಯಕುಮಾರ್ ಹಟ್ಟಿಯಂಗಡಿ ಹಾಗೂ ಮಾಜಿ ಅಧ್ಯಕ್ಷರಾದ ಎಂಎಂ ಸುವರ್ಣ, ಹೆಮ್ಮಾಡಿ ಮೀನುಗಾರರ ಪ್ರಾಥಮಿಕ ಸಹಕಾರಿ ಸಂಘ(ನಿ.) ಹೆಮ್ಮಾಡಿ ಇದರ ಅಧ್ಯಕ್ಷರಾದ ರಾಜು ಶ್ರೀಯಾನ್ ಗುಜ್ಜಾಡಿ, ಹೆಮ್ಮಾಡಿ ಘಟಕದ ಉಸ್ತುವಾರಿ ರವೀಶ್ ಕೊರವಡಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಹೆಮ್ಮಾಡಿ ಘಟಕದ ಅಧ್ಯಕ್ಷರಾದ ದಿನೇಶ್ ಕಾಂಚನ್ ಕಾರ್ಯಕ್ರಮದ ಅಧ್ಯಕ್ಷತೆಯನ್ನುವಹಿಸಿದ್ದರು. ಗೌರವಾಧ್ಯಕ್ಷ ಲೋಹಿತಾಶ್ವ ಆರ್. ಕುಂದರ್ ವಂದಿಸಿ ಕಾರ್ಯಕ್ರಮ ನಿರೂಪಿಸಿದರು.












