ಕುಂದಾಪುರ (ಸೆ, 5) : ಕುಂದಾಪುರ ತಾಲೂಕು ಯುವ ಬಂಟರ ಸಂಘದ ವತಿಯಿಂದ ಶಿಕ್ಷಕರ ದಿನಾಚರಣೆಯನ್ನು ಆರ್ ಎನ್ ಶೆಟ್ಟಿ ಸಭಾಂಗಣದಲ್ಲಿ ಕರ್ನಾಟಕ ಪಬ್ಲಿಕ್ ಸ್ಕೂಲ್ ವಂಡ್ಸೆಯ ಸಹ ಶಿಕ್ಷಕರಾದ ಶ್ರೀ ವಸಂತರಾಜ ಶೆಟ್ಟಿ ಅವರನ್ನು ಸಂಘದ ಅಧ್ಯಕ್ಷರಾದ ಶ್ರೀ ನಿತೀಶ್ ಶೆಟ್ಟಿ ಬಸ್ರೂರು ಸನ್ಮಾನಿಸಿ ಗೌರವಿಸುವ ಮೂಲಕ ಆಚರಣೆ ಮಾಡಲಾಯಿತು.

ಸನ್ಮಾನವನ್ನು ಸ್ವೀಕರಿಸಿ ಮಾತನಾಡಿದ ಶ್ರೀ ವಸಂತರಾಜ ಶೆಟ್ಟಿ ಯುವ ಬಂಟರ ಸಂಘದ ಪ್ರತಿಯೊಂದು ಕಾರ್ಯಕ್ರಮಗಳನ್ನು ಬಹಳ ಹತ್ತಿರದಿಂದ ನೋಡಿಕೊಂಡಿದ್ದೇನೆ. ಅವರು ಮಾಡುವ ಪ್ರತಿಯೊಂದು ಕಾರ್ಯಕ್ರಮಗಳು ಸಮಾಜಕ್ಕೆ ಮಾದರಿಯಾದದ್ದು. ಅದರಲ್ಲೂ ನಮ್ಮಂತಹ ಸಾಮಾನ್ಯ ಶಿಕ್ಷಕರನ್ನು ಗುರುತಿಸಿ ಗೌರವಿಸುವ ಈ ಕಾರ್ಯ ಶ್ಲಾಘನೀಯವಾದದ್ದು ಎಂದು ಹೇಳಿದರು.
ಸಂಘದ ಸ್ಥಾಪಕಾಧ್ಯಕ್ಷರಾದ ಡಾ. ಅಂಪಾರು ನಿತ್ಯಾನಂದ ಶೆಟ್ಟಿ, ಶ್ರೀ ಉದಯ್ ಕುಮಾರ್ ಶೆಟ್ಟಿ ಮಚ್ಚಟ್ಟು, ಶ್ರೀ ಪ್ರಶಾಂತ್ ಶೆಟ್ಟಿ ಶಿರೂರು, ಶ್ರೀ ಸುನಿಲ್ ಕುಮಾರ್ ಶೆಟ್ಟಿ ಹೇರಿಕುದ್ರು, ಶ್ರೀ ಸುಕುಮಾರ ಶೆಟ್ಟಿ ಹೇರಿಕುದ್ರು, ಶ್ರೀ ರಾಜೀವ ಶೆಟ್ಟಿ ಹೆಂಗವಳ್ಳಿ, ಶ್ರೀ ರತ್ನಾಕರ ಶೆಟ್ಟಿ ಕಂದಾವರ, ಶ್ರೀ ಸಂತೋಷ್ ಕುಮಾರ್ ಶೆಟ್ಟಿ ವಡೇರಹೋಬಳಿ,ಶ್ರೀ ಪ್ರಭಾಕರ ಶೆಟ್ಟಿ ಯಳಂತೂರು,ಶ್ರೀ ಸಂದೇಶ ಶೆಟ್ಟಿ ಗುಳ್ವಾಡಿ, ಶ್ರೀ ಪ್ರಕಾಶ್ ಶೆಟ್ಟಿ ಬಗ್ವಾಡಿ, ಲಯನ್ ಸದಸ್ಯರಾದ ಶ್ರೀ ಗಣೇಶ್ ಬೈಂದೂರು ಉಪಸ್ಥಿತರಿದ್ದರು.

ಡಾ. ಬಿ.ಬಿ ಹೆಗ್ಡೆ ಕಾಲೇಜಿನ ಉಪ ಪ್ರಾಂಶುಪಾಲ ಡಾ. ಚೇತನ್ ಶೆಟ್ಟಿ ಕೋವಾಡಿ ನಿರೂಪಿಸಿ ವಂದಿಸಿದರು.











