ಕುಂದಾಪುರ (ಸೆ.10): ಇಲ್ಲಿನ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವ್ಯವಹಾರ ಆಡಳಿತ ವಿಭಾಗದ ಆಯೋಜನೆಯಲ್ಲಿ ನಡೆದ “ನೋವೆಷನ್” ಮ್ಯಾನೇಜ್ಮೆಂಟ್ ಫೆಸ್ಟ್ ಇಂಟರ್ ಕಂಪೆನಿ ಸ್ಪರ್ಧೆಯ ಸಮಾರೋಪ ಸಮಾರಂಭ ಸೆಪ್ಟೆಂಬರ್ 10ರಂದು ಕಾಲೇಜಿನ ಮೂಕಾಂಬಿಕಾ ಸಭಾಂಗಣದಲ್ಲಿ ಸಂಪನ್ನಗೊoಡಿತು.

ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಡಾ| ಕೆ. ಉಮೇಶ್ ಶೆಟ್ಟಿಯವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾದ ನಿವೃತ್ತ ಪ್ರಾಂಶುಪಾಲರಾದ ಪ್ರೊ. ಜಿ. ಎಸ್. ಹೆಗ್ಡೆ ಕಾರ್ಯಕ್ರಮ ಆಯೋಜನೆ ಕುರಿತು ಮೆಚ್ಚುಗೆ ಮಾತುಗಳನ್ನಾಡಿ ವಿಜೇತರಿಗೆ ಬಹುಮಾನವನ್ನು ವಿತರಿಸಿದರು.

ಕಾಲೇಜಿನ ಉಪ-ಪ್ರಾಂಶುಪಾಲರಾದ ಡಾ. ಚೇತನ್ ಶೆಟ್ಟಿ ಕೋವಾಡಿ ಶುಭಾಶಯ ಕೋರಿದರು. ಆಡಳಿತ ವಿಭಾಗದ ಮುಖ್ಯಸ್ಥರಾದ ಶ್ರೀಮತಿ ನಂದಾ ರೈ ಸ್ವಾಗತಿಸಿದರು. ಕಾರ್ಯಕ್ರಮದ ಸಂಯೋಜಕರಾದ ಶ್ರೀ ರಜತ್ ಬಂಗೇರ ವಿಜೇತರ ಪಟ್ಟಿಯನ್ನು ವಾಚಿಸಿದರು. ವಿದ್ಯಾರ್ಥಿ ಪ್ರತಿನಿಧಿ ಕಲ್ಪನಾ ಮುಖ್ಯ ಅತಿಥಿಗಳನ್ನು ಪರಿಚಯಿಸಿದರು. ಕಿಶನ್ ವಂದಿಸಿದರು.

ಸೆಪ್ಟೆಂಬರ್ 09 ಮತ್ತು 10 ರಂದು ನಡೆದ ಈ ಇಂಟರ್ ಕಂಪೆನಿ ಸ್ಪರ್ಧೆಯಲ್ಲಿ 10 ತಂಡಗಳು ಭಾಗವಹಿಸಿದ್ದು “ಟೀಮ್ ಪಯೋನಿಯರ್ಸ್’ ಚಾಂಪಿಯನ್ ಆಗಿ ಮೂಡಿ ಬಂದಿತು ಹಾಗೂ “ಟೀಮ್ ವಿಜನರಿಸ್’ ರನ್ನರ್ ಅಪ್ ಪ್ರಶಸ್ತಿ ಹಾಗೂ ದ್ವಿತೀಯ ರನ್ನರಪ್ ಪ್ರಶಸ್ತಿಯನ್ನು ‘ನೆಕ್ಸ್÷್ಟ ಜನ್’ ಹಾಗೂ ‘ಚೇಂಜ್ ಮೇಕರ್ಸ್’ ಪಡೆದುಕೊಂಡಿತ್ತು.
ಇದೇ ಸಂದರ್ಭದಲ್ಲಿ ಪಿ.ಜಿ.ಸಿ.ಇ.ಟಿ ಯಲ್ಲಿ ಉತ್ತಮ ಸಾಧನೆಗೈದ ವಿದ್ಯಾರ್ಥಿಗಳಾದ ಸಮೃದ್ಧಿ ಕಿಣಿ, ಪ್ರೀತಂ ಡಿಸೋಜ ಹಾಗೂ ಸುಹಾನಿಯವರನ್ನು ವ್ಯವಹಾರ ಆಡಳಿತ ವಿಭಾಗದ ವತಿಯಿಂದ ಸನ್ಮಾನಿಸಲಾಯಿತು. ವಿದ್ಯಾರ್ಥಿನಿ ಅಕ್ಷಿತಾ ನಿರೂಪಿಸಿದರು.











