ಕುಂದಾಪುರ (ಆ.23): ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಕಾಲೇಜಿನ ವ್ಯವಹಾರ ಆಡಳಿತ ವಿಭಾಗದ ವತಿಯಿಂದ ವಂಡಾರಿನ ಶ್ರೀ ಕೃಷ್ಣ ಪ್ರಸಾದ್ ಗ್ರೂಪ್ ಆಫ್ ಇಂಡಸ್ಟ್ರೀಸ್ ಗೇರುಬೀಜ ಕಾರ್ಖಾನೆಗೆ ಕೈಗಾರಿಕಾ ಭೇಟಿಯನ್ನು ಹಮ್ಮಿಕೊಳ್ಳಲಾಯಿತು.

ಶ್ರೀ ಕೃಷ್ಣ ಪ್ರಸಾದ್ ಗ್ರೂಪ್ ಆಫ್ ಇಂಡಸ್ಟ್ರೀಸ್ ನ ಕಾರ್ಖಾನೆಯ ವ್ಯವಸ್ಥಾಪಕ ನಿರ್ದೇಶಕರಾದ ಈ ಸಂಪತ್ ಕುಮಾರ್ ಶೆಟ್ಟಿ ಗೇರು ಉದ್ಯಮದ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ಇದೇ ಸಂದರ್ಭದಲ್ಲಿ ಕಾಲೇಜಿನ ವ್ಯವಹಾರ ಆಡಳಿತ ವಿಭಾಗ ಹಾಗೂ ಶ್ರೀ ಕೃಷ್ಣ ಪ್ರಸಾದ್ ಗ್ರೂಪ್ ಆಫ್ ಇಂಡಸ್ಟ್ರೀಸ್ ಜೊತೆ ಪರಸ್ಪರ ಶೈಕ್ಷಣಿಕ ಒಡಂಬಡಿಕೆಯನ್ನು ಮಾಡಿಕೊಳ್ಳಲಾಯಿತು
ಕಾಲೇಜಿನ ವ್ಯವಹಾರ ಆಡಳಿತ ವಿಭಾಗದ ಮುಖ್ಯಸ್ಥರಾದ ಶ್ರೀಮತಿ ನಂದಾ ರೈ, ಆಡಳಿತ ನಿಕಾಯಕರಾದ ಶ್ರೀ ರಕ್ಷಿತ್ ರಾವ್ ಗುಜ್ಜಾಡಿ, ಪ್ರಾಧ್ಯಾಪಕರುಗಳಾದ ಶ್ರೀಮತಿ ರೇಷ್ಮಾ ಶೆಟ್ಟಿ ಹಾಗೂ ವಿಶಾಲಾಕ್ಷಿ ಉಪಸ್ಥಿತರಿದ್ದರು. ವ್ಯವಹಾರ ಆಡಳಿತ ವಿಭಾಗದ ವಿದ್ಯಾರ್ಥಿಗಳು ಕೈಗಾರಿಕಾ ಭೇಟಿಯ ಪ್ರಯೋಜನವನ್ನು ಪಡೆದುಕೊಂಡರು.










