ಹೆಮ್ಮಾಡಿ( ಸೆ.15): ಪದವಿಪೂರ್ವ ಶಿಕ್ಷಣ ಇಲಾಖೆಯವರು ಆಯೋಜಿಸಿದ ತಾಲ್ಲೂಕು ಮಟ್ಟದ ಬಾಲಕರ ವಾಲಿಬಾಲ್ ಪಂದ್ಯಾಟದಲ್ಲಿ ಜನತಾ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ತಾಲ್ಲೂಕು ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಸಾಧಕ ವಿದ್ಯಾರ್ಥಿಗಳಿಗೆ ಕಾಲೇಜಿನ ಆಡಳಿತ ಮಂಡಳಿ,ಪ್ರಾಂಶುಪಾಲರು, ಬೋಧಕ,ಬೋಧಕೇತರ ವೃಂದದವರು ಅಭಿನಂದನೆ ಕೋರಿದ್ದಾರೆ.











