ಕುಂದಾಪುರ (ಸೆ.20): ಇಲ್ಲಿನ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಸ್ವಯಂಸೇವಕರು ಪೊಲೀಸ್ ಠಾಣೆ, ಗಂಗೊಳ್ಳಿಗೆ ಭೇಟಿ ನೀಡಿ ಅಲ್ಲಿ ನಡೆದ ವಿವಿಧ ಆಯುಧಗಳ ಪ್ರಾಯೋಗಿಕ ಪ್ರದರ್ಶನದಲ್ಲಿ ಪಾಲ್ಗೊಂಡರು.

ಈ ಸಂದರ್ಭದಲ್ಲಿ ಕರಾವಳಿ ಕಾವಲುಪಡೆಯ ಪೊಲೀಸ್ ಇನ್ಸ್ಪೆಕ್ಟರ್ ವಸಂತ್ ರಾಮ್ ಆಚಾರ್ಯ ಅವರು ಪೋಕ್ಸೋ ಕಾಯಿದೆ, ಡ್ರಗ್ಸ್ ನಿಯಂತ್ರಣ ಹಾಗೂ ಸಾಮಾಜಿಕ ಜಾಲತಾಣದ ದುಷ್ಪರಿಣಾಮಗಳ ಬಗ್ಗೆ ಉದಾಹರಣೆಗಳೊಂದಿಗೆ ವಿವರಿಸಿದರು. ಇದೇ ಸಂದರ್ಭ ವಿದ್ಯಾರ್ಥಿಗಳು ಕಾನೂನಿನ ಮಾಹಿತಿ ಪಡೆಯುವುದು ವರ್ತಮಾನದ ತುರ್ತು ಎಂದು ಕಾರ್ಯಕ್ರಮದಲ್ಲಿ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಸುಬ್ರಹ್ಮಣ್ಯ ಹೆಚ್. ಹಾಗೂ ಠಾಣೆಯ ಎಲ್ಲಾ ಸಿಬ್ಬಂದಿಗಳು ಹಾಗೂ ಕಾಲೇಜಿನ ಎನ್.ಎಸ್.ಎಸ್. ಕಾರ್ಯಕ್ರಮಾಧಿಕಾರಿಗಳಾದ ರಾಜೇಶ್ ಶೆಟ್ಟಿ ವಕ್ವಾಡಿ ಹಾಗೂ ಪೂಜಾ ಕುಂದರ್ ಉಪಸ್ಥಿತರಿದ್ದರು.











