ಕುಂದಾಪುರ (ಅ.11) : ಶಿಕ್ಷಕರಿಗೆ ಪ್ರತಿಯೊಂದು ಮಗು ಬಹುಮುಖ್ಯ. ಮಕ್ಕಳಿಲ್ಲದೆ ಶಾಲೆಯನ್ನು ಊಹಿಸಲು ಸಾಧ್ಯವಿಲ್ಲ. ಶಿಕ್ಷಕರು ಪ್ರತಿಯೊಂದು ಮಗುವಿನ ಬಗ್ಗೆ ತಿಳಿದುಕೊಳ್ಳದಿದ್ದರೆ ತಾವು ಬೋಧಿಸುವ ವಿಷಯವನ್ನು ಮಗು ಅರ್ಥೈಸಿಕೊಳ್ಳಲು ಸಾಧ್ಯವಿಲ್ಲ. ಅದಕ್ಕಾಗಿ ಪ್ರತಿಯೊಂದು ಮಗುವಿನೊಂದಿಗೆ ಉತ್ತಮ ಬಾಂಧವ್ಯ ಇಟ್ಟುಕೊಂಡರೆ ಆದರ್ಶ ಶಿಕ್ಷಕನಾಗಲು ಸಾಧ್ಯ ಎಂದು ಲಿಟಲ್ ರಾಕ್ ಇಂಡಿಯನ್ ಶಾಲೆಯ ಶಿಕ್ಷಣ ಸಂಸ್ಥೆಯ ನಿರ್ದೇಶಕರಾದ ಮ್ಯಾಥ್ಯು ಸಿ ನೈನಾನ್ ಅವರು ಸುವರ್ಣ ಸಂಭ್ರಮದ ಆಚರಣೆಯಲ್ಲಿರುವ ಕುಂದಾಪುರ ಎಜುಕೇಶನ್ ಸೊಸೈಟಿ(ರಿ.) ಪ್ರವರ್ತಿತ ಎಚ್.ಎಮ್. ಎಮ್ ಮತ್ತು ವಿ.ಕೆ.ಆರ್ ಶಾಲೆಗಳು ಶಿಕ್ಷಕರಿಗಾಗಿ ಆಯೋಜಿಸಿದ ‘ವಿ ಕೇರ್ – 2025’ ಶಿಕ್ಷಕರ ಸಬಲೀಕರಣ ಕಾರ್ಯಾಗಾರದಲ್ಲಿ ಮಾತನಾಡಿದರು.

ಸಂಸ್ಥೆಯ ಪ್ರಾಂಶುಪಾಲರಾದ ಚಿಂತನಾ ರಾಜೇಶ್ ಅವರು ಪ್ರಾಸ್ತಾವಿಕ ಮಾತುಗಳನ್ನಾಡಿದರು. ಸಂಸ್ಥೆಯ ಎಲ್ಲಾ ವಿಭಾಗದ ಮುಖ್ಯಸ್ಥರು, ಶಿಕ್ಷಕರು ಹಾಗೂ ಕುಂದಾಪುರ ಪರಿಸರದ ವಿವಿಧ ಸರಕಾರಿ ಮತ್ತು ಖಾಸಗಿ ಶಾಲೆಯ ಶಿಕ್ಷಕರು ಭಾಗವಹಿಸಿದ್ದರು. ಪ್ರೌಢಶಾಲಾ ಮುಖ್ಯಶಿಕ್ಷಕಿ ಶುಭಾ ಕೆ. ಎನ್ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.











